HomeLatest NewsBREAKING NEWS: ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಓರ್ವ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಪಾರು!

BREAKING NEWS: ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಓರ್ವ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಪಾರು!

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಓರ್ವ ಪ್ರಯಾಣಿಕ ಪವಾಡ ರೀತಿಯಲ್ಲಿ ಬಚಾವ್ ಆಗಿದ್ದಾರೆ.

ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಲಂಡನ್ ಗೆ ತೆರಳುತ್ತಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನ ಪತನಗೊಂಡಿದೆ. ಎರಡು ಕಟ್ಟಡಗಳಿಗೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡು ನೆಲಕ್ಕೆ ಉರುಳಿದೆ. ವಿಮಾನದಲ್ಲಿದ್ದ 242 ಜನರಲ್ಲಿ ಓರ್ವ ಪ್ರಯಾಣಿಕ ಪವಾಡ ರೀತಿಯಲ್ಲಿ ಬದುಕುಳಿದಿದ್ದಾರೆ. ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ 241 ಜನರು ಸಾವನ್ನಪ್ಪಿದ್ದಾರೆ.

ವಿಮಾನ ದುರಂತದಲ್ಲಿ ಬದುಕುಳಿತ ಪ್ರಯಾಣಿಕನನ್ನು ರಮೇಶ್ ಎಂದು ಗುರುತಿಸಲಾಗಿದೆ. 38 ವರ್ಷದ ರಮೇಶ್ ವಿಮಾನದ ಸೀಟ್ ನಂ. 11ರಲ್ಲಿ ಕುಳಿತಿದ್ದರು. ವಿಮಾನ ಪತನವಾಗುತ್ತಿದ್ದಂತೆ ಎಮರ್ಜನ್ಸಿ ಡೋರ್ ಮೂಲಕ ಹಾರಿ ಬಚಾವ್ ಆಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ರಮೇಶ್ ಅವರನ್ನು ಅಹಮದಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಮೀಷ್ನರ್ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular