HomeLatest NewsBREAKING: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ ಪ್ರಕರಣ: ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ

BREAKING: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ ಪ್ರಕರಣ: ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನೊಂಡು 246 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.

ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ AI-171 ವಿಮಾನ ನಿನ್ನೆ ಮಧ್ಯಾಹ್ನ ಅಹಮದಾಬಾದ್ ನ ಮೆಘಾನಿ ನಗರದಲ್ಲಿ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತ್ತು. ಕಟ್ಟಡಗಳಿಗೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡು ವಿಮಾನ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ದುರಂತದಲ್ಲಿ ಓರ್ವ ಪ್ರಯಾಣಿಕ ಮಾತ್ರ ಎಮರ್ಜನ್ಸಿ ಡೋರ್ ಮೂಲಕ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಘಟನೆಯಲ್ಲಿ 246 ಜನರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ವಿಮಾನ ದುರಂತದ ಸ್ಥಳದಲ್ಲಿ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ಬ್ಲ್ಯಾಕ್ ಬಾಕ್ಸ್ ಮೂಲಕ ವಿಮಾನ ದುರಂತಕ್ಕೆ ಕಾರಣವೇನು ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ. ಬ್ಲ್ಯಾಕ್ ಬಾಕ್ಸ್ ವಶಪಡಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular