BREAKING: ವಿಮಾನ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ಘೋಷಣೆ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ AI-171 ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ಹೊತ್ತಿ ಉರಿದಿದೆ. ದುರಂತದಲ್ಲಿ 242 ಜನರು ಸಾವನ್ನಪ್ಪಿದ್ದಾರೆ. ಓರ್ವ ಪ್ರಯಾಣಿಕ ಮಾತ್ರ ಪವಾಡ ಸದೃಶ ರೀತಿಯಲ್ಲಿ ಬಚಾವ್ ಆಗಿದ್ದಾರೆ.

ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾಣಿ ಸೇರಿದಂತೆ 242 ಜನರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಟಾಟಾ ಗ್ರೂಪ್ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದೆ.

ಏರ್ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಗ್ರೂಪ್, ವಿಮಾನ ಪತನದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಭರಿಸುವುದಾಗಿ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read