HomeLatest NewsBIG NEWS: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ದುರಂತ: 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆ

BIG NEWS: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ದುರಂತ: 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ 274 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.

ಏರ್ ಇಂದಿಯಾ ಬೋಯಿಂಗ್ 787-8 ವಿಮಾನದ 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ವಿಮಾನದಲ್ಲಿ ಎರಡು ಬ್ಲ್ಯಾಕ್ ಬಾಕ್ಸ್ ಗಳಿದ್ದವು. ವಿಮಾನದ ಫ್ಲೈಟ್ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ ಭಾನುವಾರ ಪತ್ತೆಯಾಗಿದೆ.

ಎರಡನೇ ಬ್ಲ್ಯಾಕ್ ಬಾಕ್ಸ್ ನಿಂದ ಘಟನೆಯ ಪ್ರತಿ ಸೆಕೆಂಡ್ ನಲ್ಲಿ ಏನಾಯ್ತು ಎಂಬುದನ್ನು ಅರ್ಥಮಾಡಿಕೊಳ್ಳಲು ಸಹಾಯವಾಗಲಿದೆ. ಇದು ಕಾಕ್ ಪಿಟ್ ಹಾಗೂ ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬ ಬಗ್ಗೆ ನಿಖರ ಮಾಹಿತಿ ನೀಡಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular