HomeLatest NewsBREAKING: ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಮೃತರ ಕುಟುಂಬಕ್ಕೆ ಏರ್ ಇಂಡಿಯಾದಿಂದ ತಲಾ 25 ಲಕ್ಷ...

BREAKING: ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಮೃತರ ಕುಟುಂಬಕ್ಕೆ ಏರ್ ಇಂಡಿಯಾದಿಂದ ತಲಾ 25 ಲಕ್ಷ ಪರಿಹಾರ ಘೋಷಣೆ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನದಲ್ಲಿ 274 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದೆ.

ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ AI-171 ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ಕಟ್ಟಡಗಳಿಗೆ ಡಿಕ್ಕಿ ಹೊಡೊದು ಬೆಂಕಿಯಲ್ಲಿ ಹೊತ್ತಿ ಉರಿದಿತ್ತು. ವಿಮಾನದಲ್ಲಿದ್ದವರು, ಕಾಲೇಜು ಹಾಸ್ಟೆಲ್ ಕಟ್ಟಡ, ಸುತ್ತಮುತ್ತಲ ಪ್ರದೇಶದಲ್ಲಿದ್ದವರು ಸೇರಿದಂತೆ 274 ಜನರು ಸಾವನ್ನಪ್ಪಿದ್ದರು.

ದುರಂತದ ಬೆನ್ನಲ್ಲೇ ಏರ್ ಇಂಡಿಯಾ ಮಾಲಿಕತ್ವ ವಹಿಸಿರುವ ಟಾಟಾ ಗ್ರೂಪ್ ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿತ್ತು. ಗಾಯಾಳುಗಳ ಚಿಕಿತ್ಸೆ ವೆಚ್ಚ ತಾನೇ ಭರಿಸುವುದಾಗಿ ತಿಳಿಸಿದೆ. ಅಲ್ಲದೇ ಹಾನಿಗೊಳಗಾದ ಕಟ್ಟಡವನ್ನೂ ನಿರ್ಮಿಸಿಕೊಡುವುದಾಗಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಬೆನ್ನಲ್ಲೇ ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular