HomeIndiaಅಹಿಂದ ನಾಯಕತ್ವದ ಉತ್ತರಾಧಿಕಾರಿ ಪಟ್ಟಾಭಿಷೇಕಕ್ಕೆ ಇನ್ನೂ ಕಾಲ ಪಕ್ವವಾಗಿಲ್ಲ: ಸತೀಶ್ ಜಾರಕಿಹೊಳಿ

ಅಹಿಂದ ನಾಯಕತ್ವದ ಉತ್ತರಾಧಿಕಾರಿ ಪಟ್ಟಾಭಿಷೇಕಕ್ಕೆ ಇನ್ನೂ ಕಾಲ ಪಕ್ವವಾಗಿಲ್ಲ: ಸತೀಶ್ ಜಾರಕಿಹೊಳಿ

ಬೆಂಗಳೂರು-ಅಹಿಂದ ನಾಯಕತ್ವದ ಉತ್ತರಾಧಿಕಾರಿ ಪಟ್ಟಾಭಿಷೇಕಕ್ಕೆ ಇನ್ನೂ ಕಾಲ ಪಕ್ವವಾಗಿಲ್ಲ. ದಾರಿಗಳು ನೂರೊಂದು ಇರಬಹುದು, ಆದರೆ ನಮ್ಮ ಗುರಿ ಒಂದೇ. ಅಹಿಂದ ಬ್ಲಡ್ ಯಾವಾಗಲೂ ಒಂದೇ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಎಚ್.ಸಿ. ಮಹದೇವಪ್ಪ ಪ್ರತ್ಯೇಕವಾಗಿ ಅಹಿಂದ ಸಮಾವೇಶ ನಡೆಸುವ ವಿಚಾರವಾಗಿ ಪ್ರತಿಕ್ರಿಯಿಸಿದರು. ನಿನ್ನೆ ನಡೆದ ಸಭೆಗೆ ತಮಗೆ ಆಹ್ವಾನ ಇರಲಿಲ್ಲ. ಹೀಗಾಗಿ ಸಭೆಗೆ ಹೋಗಿಲ್ಲ. ಆದರೆ ಏನೇ ಆದರೂ ನಾವೆಲ್ಲರೂ ಒಂದೇ. ಬೆಂಗಳೂರಿಗೆ ಬರಲು ನೂರಾರು ದಾರಿಗಳಿದ್ದರೂ ಎಲ್ಲರೂ ಒಂದೇ ಕಡೆ ಸೇರುವಂತೆ ಅಹಿಂದ ವಿಚಾರದಲ್ಲೂ ನಮ್ಮ ನಿಲುವು ಒಂದೇ ಎಂದರು.

ಅಹಿಂದ ನಾಯಕತ್ವದ ಕುರಿತು, ಯಾರು ನಾಯಕತ್ವ ವಹಿಸಿಕೊಳ್ಳುತ್ತಾರೋ ಅವರೇ ಅಹಿಂದ ನಾಯಕ ಆಗುತ್ತಾರೆ. ಈ ಹಿಂದೆ ಸಿದ್ದರಾಮಯ್ಯ ಅವರು ನಾಯಕತ್ವ ವಹಿಸಿದ್ದರು. ಮುಂದಿನ ವಿಚಾರವನ್ನು ಕಾದು ನೋಡೋಣ. ಆದರೆ ಅಹಿಂದ ಉತ್ತರಾಧಿಕಾರಿ ಪಟ್ಟಾಭಿಷೇಕಕ್ಕೆ ಈಗಲೇ ಸಮಯ ಪಕ್ವವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಅಥವಾ ಮೂರನೇ ಮುಖ್ಯಮಂತ್ರಿ ವಿಚಾರವಾಗಿ ಯಾವುದೇ ಚರ್ಚೆ ನಡೆಯುತ್ತಿಲ್ಲ. ಈಗಿರುವವರೇ ಸರ್ಕಾರ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡು ಇನ್ನೂ ನಾಲ್ಕು ತಿಂಗಳಷ್ಟೇ ಆಗಿದೆ. ಹೀಗಿರುವಾಗ ದಲಿತ ಮುಖ್ಯಮಂತ್ರಿ ವಿಚಾರ ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ವಿಚಾರವಾಗಿ, ಪಕ್ಷದ ಹಾಗೂ ಇತರ ವಿಷಯಗಳ ಕುರಿತು ಚರ್ಚೆ ನಡೆಸಬಹುದು. ಇಬ್ಬರು ಪ್ರತ್ಯೇಕವಾಗಿ ಮಾತನಾಡುವಾಗ ಏನು ಚರ್ಚೆಯಾಗುತ್ತದೆ ಎಂಬುದು ನಮಗೆ ಹೇಗೆ ಗೊತ್ತಾಗುತ್ತದೆ? ಸಿದ್ದರಾಮಯ್ಯ ಅವರು ಮುಕ್ತವಾಗಿ ಮಾತನಾಡುವ ಅವಕಾಶ ಹೊಂದಿದ್ದಾರೆ ಎಂದರು.

ಗಾರಹ ಸಚಿವೆ ಗಂಭೀರವಾಗಿ ತನಿಖೆ

ಗಂಭೀರವಾಗಿ ತನಿಖೆ

ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ಪ್ರಕರಣದ ಮೂಲ ಎಲ್ಲಿಂದ ಆರಂಭವಾಯಿತು ಎಂಬುದರ ಕುರಿತು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣದ ತನಿಖೆ ಪೂರ್ಣಗೊಳ್ಳಲು ಸಮಯ ಬೇಕಾಗುತ್ತದೆ. ಸರ್ಕಾರವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದೆ ಎಂದರು.

ಯಾವುದೇ ಸರ್ಕಾರದ ಅವಧಿಯಲ್ಲಾದರೂ ಇಂತಹ ಘಟನೆಗಳು ನಡೆದಾಗ ಗಂಭೀರವಾಗಿ ಪರಿಗಣಿಸಬೇಕು. ಇಂತಹ ಕೃತ್ಯಗಳಿಂದ ಯಾರಿಗೆ ಏನು ಲಾಭವಾಗುತ್ತದೆ? ಸ್ಟಿಂಗ್ ಮಾಡಿದವರಿಗೆ ವೈಯಕ್ತಿಕ ಲಾಭವಾಗಬಹುದು. ಆದರೆ ಇಂತಹ ಘಟನೆಗಳು ಯಾವುದೇ ರಾಜಕೀಯ ಪಕ್ಷದಲ್ಲೂ ನಡೆಯಬಾರದು.ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರೇ ಭಾಗಿಯಾಗಿದ್ದಾರೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ. ನಮ್ಮ ಪಕ್ಷದವರೇ ಇದ್ದಾರೆ ಎಂದು ಅನಿಸುವುದಿಲ್ಲ. ಅನಗತ್ಯವಾಗಿ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರವಾಗಿ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಸಂದರ್ಭದಲ್ಲಿ ಮತದಾರರ ಹೆಸರುಗಳನ್ನು ಅಳಿಸಿರುವ ವಿಚಾರವಾಗಿ ಮಾತನಾಡಿದ ಅವರು, ತಾವು ತಮ್ಮ ಜಿಲ್ಲೆಗೆ ಸೀಮಿತವಾಗಿ ಹೇಳಿಕೆ ನೀಡಿದ್ದಾಗಿ ಸ್ಪಷ್ಟಪಡಿಸಿದರು.

ತಮ್ಮ ಜಿಲ್ಲೆಯಲ್ಲಿ ಸುಮಾರು 17 ಸಾವಿರ ಮತದಾರರ ಹೆಸರುಗಳನ್ನು ಅಳಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ಅಳಿಸುವಿಕೆ ಸರಿಯಾಗಿರಬಹುದು ಎಂಬ ಅರ್ಥದಲ್ಲಿ ಮಾತನಾಡಿದ್ದೆ. ಆದರೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆಂದು ತೋರಿಸಿ ಜೀವಂತ ವ್ಯಕ್ತಿಗಳ ಹೆಸರುಗಳನ್ನೂ ಅಳಿಸಿರುವ ಪ್ರಕರಣಗಳು ಕಂಡುಬಂದಿವೆ. ಈ ಬಗ್ಗೆ ನಮ್ಮವರು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಕಮಿಷನರ್ ಗಮನಕ್ಕೆ ತಂದಿದ್ದಾರೆ ಎಂದರು.

ತಮ್ಮ ಹೇಳಿಕೆಯನ್ನು ಕೆಲವರು ಪ್ರಶ್ನಿಸಿದ್ದರಿಂದ ಸ್ಪಷ್ಟನೆ ನೀಡಿದ್ದೇನೆ. ಬೆಂಗಳೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೆಸರುಗಳನ್ನು ಅಳಿಸಿಲ್ಲ ಎಂಬ ಅಭಿಪ್ರಾಯಕ್ಕೆ ತಮ್ಮ ಹೇಳಿಕೆಯನ್ನು ಸೀಮಿತಗೊಳಿಸಬಾರದು ಎಂದು ಪರೋಕ್ಷವಾಗಿ ತಿಳಿಸಿದರು.

2011ರ ಬ್ಯಾಚ್ ಕೆಎಎಸ್ ಅಧಿಕಾರಿಗಳ ನೇಮಕಾತಿ ವಿಚಾರ

2011ರ ಬ್ಯಾಚ್ ಕೆಎಎಸ್ ಅಧಿಕಾರಿಗಳ ನೇಮಕಾತಿ ವಿಚಾರ

2011ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ನಡೆದಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಬ್ಯಾಚ್‌ನ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ಕಾನೂನು ರೂಪಿಸಲಾಗಿತ್ತು. ಈಗ ಆ ಕಾನೂನಿಗೆ ನಾವು ಬದ್ಧರಾಗಿರಬೇಕು ಎಂಬ ಅಭಿಪ್ರಾಯ ಸಂಪುಟದಲ್ಲಿ ವ್ಯಕ್ತವಾಗಿದೆ. ಬಿಜೆಪಿ ಸರ್ಕಾರವೇ ಈ ಅಧಿಕಾರಿಗಳ ರಕ್ಷಣೆಗೆ ಕಾನೂನು ತಂದಿರುವುದರಿಂದ ಅದನ್ನು ಪಾಲಿಸಬೇಕಾಗಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular