ನವದೆಹಲಿ : ಗುಜರಾತ್ ನ ವಲ್ಸಾದ್ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಹ್ಮದಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಘಲ್ಧಾರಾ ಗ್ರಾಮದ ಬಳಿ ಟ್ಯಾಂಕರ್ ಪಲ್ಟಿಯಾಗಿ ಸ್ಥಳದಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಡುಂಗ್ರಿ ಪೊಲೀಸರು ಸೇರಿದಂತೆ ಹಲವಾರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೊತ್ತಿಗಾಗಲೇ ಟ್ಯಾಂಕರ್ ಸುಟ್ಟು ಭಸ್ಮವಾಗಿದೆ.
https://twitter.com/ANI/status/1760344870290374985?ref_src=twsrc%5Etfw%7Ctwcamp%5Etweetembed%7Ctwterm%5E1760344870290374985%7Ctwgr%5E0515efca8d09f955ff8b409ee86ab94b1d9a442a%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಸುದ್ದಿ ಸಂಸ್ಥೆ ಎಎನ್ಐ ಬಿಡುಗಡೆ ಮಾಡಿದ ವೀಡಿಯೊದಲ್ಲಿ, ಟ್ಯಾಂಕರ್ ಇದ್ದಕ್ಕಿದ್ದಂತೆ ಪಲ್ಟಿಯಾಗಿ ತಕ್ಷಣ ಬೆಂಕಿ ಹೊತ್ತಿಕೊಂಡಿರುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಬೆಂಕಿ ಎಷ್ಟು ತೀವ್ರವಾಗಿದೆಯೆಂದರೆ, ಸ್ವಲ್ಪ ಸಮಯದಲ್ಲೇ ಟ್ಯಾಂಕರ್ ತೀವ್ರವಾಗಿ ಸುಟ್ಟುಹೋಗಿದೆ.