HomeLatest NewsBIG UPDATE : ಅಹಮದಾಬಾದ್ ಭೀಕರ ವಿಮಾನ ದುರಂತ : ಮೃತಪಟ್ಟವರ ಸಂಖ್ಯೆ 265 ಕ್ಕೆ...

BIG UPDATE : ಅಹಮದಾಬಾದ್ ಭೀಕರ ವಿಮಾನ ದುರಂತ : ಮೃತಪಟ್ಟವರ ಸಂಖ್ಯೆ 265 ಕ್ಕೆ ಏರಿಕೆ.!

ಅಹಮದಾಬಾದ್ : ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 265 ಕ್ಕೆ ಏರಿಕೆಯಾಗಿದೆ. ವಿಮಾನದಲ್ಲಿದ್ದ 241 ಜನ ಪ್ರಯಾಣಿಕರು ಹಾಗೂ ಇನ್ನುಳಿದ 24 ಮಂದಿ ಪ್ರಾಣ ತೆತ್ತಿದ್ದಾರೆ. ದುರಂತದಲ್ಲಿ ವೈದ್ಯಕೀಯ ಕಾಲೇಜಿನ 24 ವಿದ್ಯಾರ್ಥಿಗಳು ಸೇರಿ ಒಟ್ಟು 265 ಮಂದಿ ಪ್ರಾಣ ತೆತ್ತಿದ್ದಾರೆ.

ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ಪತನಗೊಂಡು ಹೊತ್ತಿ ಉರಿದಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. .ಅಹಮದಾಬಾದ್ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಏರ್ ಇಂಡಿಯಾ ವಿಮಾನ ದುರಂತ ಘಟನೆಯಲ್ಲಿ ವಿಮನದಲ್ಲಿದ್ದ ಯಾರೊಬ್ಬರೂ ಕೂಡ ಬದುಕುಳಿದಿಲ್ಲ. ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಎಲ್ಲಾ ಶವಗಳ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಅವುಗಳನ್ನು ಸಂರಕ್ಷಿಸಲು ಸಿದ್ಧತೆಗಳು ನಡೆಯುತ್ತಿವೆ. ಪೈಲಟ್, ಸಹ ಪೈಲಟ್ ಮತ್ತು ಒಬ್ಬ ಸಿಬ್ಬಂದಿಯನ್ನು ಗುರುತಿಸಲಾಗಿದೆ. 10 ವೈದ್ಯಕೀಯ ವಿದ್ಯಾರ್ಥಿಗಳ ಶವಗಳನ್ನು ಸಹ ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ AI-171 ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ಹೊತ್ತಿ ಉರಿದಿದೆ. ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಟಾಟಾ ಗ್ರೂಪ್ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದೆ. ಏರ್ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಗ್ರೂಪ್, ವಿಮಾನ ಪತನದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಭರಿಸುವುದಾಗಿ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular