ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗ ಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮಾ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶರ್ಟ್ ಬಿಚ್ಚಿ ಅರೆಬೆತ್ತಲಾಗಿ ಪ್ರತಿಭಟನೆ ನಡೆಸಿದ್ದಾರೆ.
ಎಐ ಶೃಂಗ ಸಭೆಯ ಆವರಣದೊಳಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರಧಾನಿ ಮೋದಿ ಹಾಗೂ ಡೊನಾಲ್ಡ್ ಟ್ರಂಪ್ ಇರುವ ಅಂಗಿಗಳನ್ನು ಕೈಯಲ್ಲಿ ಹಿಡಿದು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಹಲವು ದೇಶಗಳ ಗಣ್ಯಾತಿಗಣ್ಯರು ಈ ಶ್ರಿಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈ ರೀತಿ ಟೀ ಶರ್ಟ್ ಬಿಚ್ಚಿ ಕೈಯಲ್ಲಿ ಹಿಡಿದು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿರುವುದು ಮೋದಿ ನೇತೃತ್ವದ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದೆ.
ಭಾರತ ಹಾಗೂ ಯುಎಸ್ ಒಪ್ಪಂದದ ಕುರಿತು ಘೋಷಣೆಗಳನ್ನು ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಟ್ರಂಪ್ ಜೊತೆ ರಾಜೀಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಕೆಲ ಕಾಲ ಸಭಾಗಂಣದಲ್ಲಿ ಪ್ರತಿಭಟನೆ ಕಾವೇರಿದ್ದು, ಪರಿಸ್ಥಿತಿ ತೀವ್ರಸ್ವರೂಪ ಪಡೆದುಕೊಳ್ಳುತ್ತಿದಂತೆ ಭದ್ರತಾ ಸಿಬ್ಬಂದಿಗಳು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಸಭಾಂಗಣದಿಂದ ಬಲವಂತವಾಗಿ ಹೊರ ಕಳುಹಿಸಿದ ಘಟನೆ ನಡೆದಿದೆ.

