HomeCrimeಎಐಎಡಿಎಂಕೆ ಕಾರ್ಯಕರ್ತನ ಬರ್ಬರ ಹತ್ಯೆ

ಎಐಎಡಿಎಂಕೆ ಕಾರ್ಯಕರ್ತನ ಬರ್ಬರ ಹತ್ಯೆ

ತಮಿಳುನಾಡಿನ ಕಡಲೂರಿನಲ್ಲಿ ಎಐಎಡಿಎಂಕೆ(ಪಳನಿಸ್ವಾಮಿ ಪಕ್ಷದ) ಕಾರ್ಯಕರ್ತನೊಬ್ಬನನ್ನು ಕಡಿದು ಹತ್ಯೆ ಮಾಡಲಾಗಿದೆ. ಪುದುಚೇರಿ ಗಡಿಯಲ್ಲಿ ಈ ಘಟನೆ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ತಿರುಪಾಪುಲಿಯೂರಿನ ನಿವಾಸಿ ಪದ್ಮನಾಭನ್ ಎಂದು ಗುರುತಿಸಲಾಗಿದ್ದು, ಇವರು ಅಂಗಡಿ ನಡೆಸುತ್ತಿದ್ದರು. ಅವರು ಬಾಗೂರು ಗ್ರಾಮದ ಕಡೆಗೆ ಪ್ರಯಾಣಿಸುತ್ತಿದ್ದಾಗ ಅಪರಿಚಿತರ ಗುಂಪೊಂದು ಹಿಂಬಾಲಿಸಿ ಅವರನ್ನು ಸುತ್ತುವರೆದು ಹತ್ಯೆ ಮಾಡಿ ಪರಾರಿಯಾಗಿದೆ.

ದುಷ್ಕರ್ಮಿಗಳು ತಮ್ಮ ನಾಲ್ಕು ಚಕ್ರದ ವಾಹನವನ್ನು ಪದ್ಮನಾಭನ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಅವರನ್ನು ಕೊಂದು ಹಾಕಿದ್ದಾರೆ. ಪದ್ಮನಾಭನ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular