HomeKarnatakaBREAKING NEWS: ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ ಸೇರಿ ಬೆಳಗಾವಿ CWC ಸಭೆಯಲ್ಲಿ 2 ಪ್ರಮುಖ...

BREAKING NEWS: ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ ಸೇರಿ ಬೆಳಗಾವಿ CWC ಸಭೆಯಲ್ಲಿ 2 ಪ್ರಮುಖ ನಿರ್ಣಯ

ಬೆಳಗಾವಿ: ಕಾಂಗ್ರೆಸ್ ಇತಿಹಾಸದಲ್ಲಿ ಇಂದು ಐತಿಹಾಸಿಕ ಸಭೆ ಆಗಿದೆ. ಸಭೆಯಲ್ಲಿ ಎರಡು ಮಹತ್ವದ ನಿರ್ಣಯ ಕೈಗೊಂಡಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಸಿಡಬ್ಲ್ಯೂಸಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2025 ರಲ್ಲಿ ಸಂಘಟನೆಗೆ ಪರಿವರ್ತನೆ ತರಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬೂತ್ ಮಟ್ಟದಿಂದ ಮೇಲಿನ ಹಂತದವರೆಗೂ ಬದಲಾವಣೆ ತರಲಾಗುವುದು. ಸಂಘಟನೆಯ ದೃಷ್ಟಿಯಿಂದ ಮಹತ್ವದ ಬದಲಾವಣೆ ಮಾಡುತ್ತೇವೆ. ನಾಯಕತ್ವ ಯಾರಿಗೆ ಇದೆಯೋ ಅವರಿಗೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಂಧೀಜಿ ಎಐಸಿಸಿ ಅಧ್ಯಕ್ಷರಾಗಿ ಸಮ್ಮೇಳನ ನಡೆಸಿದ ಸ್ಥಳ ಇದಾಗಿದೆ. 100 ವರ್ಷದ ನಂತರ ಮತ್ತೆ ಇದೇ ಸ್ಥಳದಲ್ಲಿ ಸಭೆ ನಡೆದಿದೆ. ಅದೇ ಪರಂಪರೆ ನಾವು ಮುಂದುವರೆಸಿಕೊಂಡು ಬಂದಿದ್ದೇವೆ ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಹಾದಿಯಲ್ಲಿ ನಾವು ನಡೆಯಬೇಕೆಂದು ತೀರ್ಮಾನಿಸಲಾಗಿದೆ ಎಂದು ಸಿಡಬ್ಲ್ಯೂಸಿ ಸಭೆಯ ಬಳಿಕ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. 2025ರ ಫೆಬ್ರವರಿ ಇಂದ ನವೆಂಬರ್ ನಡುವೆ ಸಭೆ ನಡೆಯುವುದಿಲ್ಲ. ಇದು ಪಕ್ಷ ಸಂಘಟನೆಯ ವರ್ಷ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular