BREAKING : ನಿಗಮ ಮಂಡಳಿ ನೇಮಕಕ್ಕೆ AICC ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಗ್ರೀನ್ ಸಿಗ್ನಲ್

ಬೆಂಗಳೂರು : ನಿಗಮ ಮಂಡಳಿ ನೇಮಕಕ್ಕೆ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ನಿಗಮ ಮಂಡಳಿ ನೇಮಕಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ತಿಂಗಳ ಅಂತ್ಯ ಅಥವಾ ಮುಂದಿನ ವಾರ ನಿಗಮ ಮಂಡಳಿ ನೇಮಕಾತಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಾಸಕರು ಹಾಗೂ ಕಾರ್ಯಕರ್ತರಲ್ಲಿ ಯಾರನ್ನ ನಿಗಮ ಮಂಡಳಿಗೆ ನೇಮಕ ಮಾಡಬೇಕು ಎಂಬ ಗೊಂದಲ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಸೃಷ್ಟಿಯಾಗಿತ್ತು. ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇದಕ್ಕೆ ಅಸ್ತು ಎಂದಿದ್ದಾರೆ. ಶಾಸಕರು, ಪರಿಷತ್ ಸದಸ್ಯರು ಹಾಗೂ ಕಾರ್ಯಕರ್ತರನ್ನೊಳಗೊಂಡ ಪಟ್ಟಿ ತಯಾರಿಸುವಂತೆ ಸೂಚಿಸಿದ್ದಾರೆ.

ಟಿಕೆಟ್ ಸಿಗದೇ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದವರಿಗೆ ಮೊದಲ ಆದ್ಯತೆ ನೀಡುವಂತೆ ಖರ್ಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಈ ತಿಂಗಳ ಅಂತ್ಯ ಅಥವಾ ಮುಂದಿನ ವಾರ ನಿಗಮ ಮಂಡಳಿ ನೇಮಕಾತಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read