ʼಕುಸುಬೆʼ ಬೆಳೆಗಾರರಿಗೆ ಗುಡ್‌ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಖರೀದಿ

ಕರ್ನಾಟಕದ ಕುಸುಬೆ ಬೆಳೆಗಾರರಿಗೆ ಸರ್ಕಾರವು ಸಂತಸದ ಸುದ್ದಿಯನ್ನು ನೀಡಿದೆ. ಮಾರುಕಟ್ಟೆಯಲ್ಲಿ ಕುಸಿದಿರುವ ಕುಸುಬೆ ಬೆಲೆಗೆ ಪರಿಹಾರವಾಗಿ, ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ ₹5,940 ದರವನ್ನು ನಿಗದಿಪಡಿಸಲಾಗಿದೆ.

ಇದರಿಂದಾಗಿ ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಕೃಷಿ ಮಾರುಕಟ್ಟೆ ಸಚಿವರು ಈ ಕುರಿತು ಮಾಹಿತಿ ನೀಡಿದ್ದು, ಮಾರುಕಟ್ಟೆಯಲ್ಲಿನ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಒಳಗಾಗಿದ್ದ ರೈತರಿಗೆ ಈ ಬೆಂಬಲ ಬೆಲೆ ಸಹಾಯ ಮಾಡಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಕುಸುಬೆ ಕಟಾವು ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್ ಅಂತ್ಯದವರೆಗೆ ನಡೆಯಲಿದೆ ಮತ್ತು ಏಪ್ರಿಲ್ ವರೆಗೂ ಮಾರುಕಟ್ಟೆಗೆ ಕುಸುಬೆ ಆವಕವಾಗಲಿದೆ.

ರೈತರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುವ ಬದಲು, ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read