HomeCrimeಪ್ರೀತಿ ಹೆಸರಲ್ಲಿ ಗಗನಸಖಿಗೆ ನರಕ ದರ್ಶನ ಮಾಡಿಸಿದ್ದ ಕಾಮುಕ ಅಂದರ್: ಕಿರುಕುಳಕ್ಕೆ ಬ್ರೇಕ್ ಹಾಕಿದ ಬಾಗಲೂರು...

ಪ್ರೀತಿ ಹೆಸರಲ್ಲಿ ಗಗನಸಖಿಗೆ ನರಕ ದರ್ಶನ ಮಾಡಿಸಿದ್ದ ಕಾಮುಕ ಅಂದರ್: ಕಿರುಕುಳಕ್ಕೆ ಬ್ರೇಕ್ ಹಾಕಿದ ಬಾಗಲೂರು ಪೊಲೀಸರು

ಬೆಂಗಳೂರು: ತರಬೇತಿ ನಿರತ ಗಗನಸಖಿಯೊಬ್ಬರ ಮೇಲೆ ರಸ್ತೆಯಲ್ಲೇ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕನನ್ನು ಬಾಗಲೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದ್ದು, ಈತ ಪ್ರೀತಿ ಹೆಸರಲ್ಲಿ ಯುವತಿಗೆ ಸತತವಾಗಿ ಕಾಟ ನೀಡುತ್ತಿದ್ದ ಎಂದು ತಿಳಿದುಬಂದಿದೆ.

ಸ್ನೇಹದ ಹೆಸರಲ್ಲಿ ಶುರುವಾದ ಕಿರುಕುಳ

ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಚಂದ್ರಶೇಖರ್ ಮತ್ತು ಸಂತ್ರಸ್ತ ಯುವತಿ ಒಂದೇ ಏರಿಯಾದಲ್ಲಿ ವಾಸವಾಗಿದ್ದ ಪರಿಚಯಸ್ಥರು. ಆರಂಭದಲ್ಲಿ ಇಬ್ಬರ ನಡುವೆ ಸ್ನೇಹವಿತ್ತು, ಆದರೆ ಇತ್ತೀಚೆಗೆ ಚಂದ್ರಶೇಖರ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸಲು ಆರಂಭಿಸಿದ್ದ. ಯುವಕನ ಈ ವಿಕೃತ ವರ್ತನೆಯಿಂದ ಬೇಸತ್ತ ಯುವತಿ ಆತನನ್ನು ದೂರ ಮಾಡಲು ಪ್ರಯತ್ನಿಸಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಡುರಸ್ತೆಯಲ್ಲೇ ವಿಕೃತಿ ಮೆರೆದ ಆರೋಪಿ

ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆ ಎಂಬ ಕಾರಣಕ್ಕೆ ರೊಚ್ಚಿಗೆದ್ದ ಆರೋಪಿ, ಯುವತಿಯನ್ನು ಹಿಂಬಾಲಿಸಿ ಕಾಟ ಕೊಡಲು ಶುರುಮಾಡಿದ್ದ,ಯುವತಿ ಕಾಲೇಜಿಗೆ ಹೋಗುವಾಗ ಚಂದ್ರಶೇಖರ್ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಹಿಂಬಾಲಿಸುತ್ತಿದ್ದ.

ಕಳೆದ ಒಂದು ವಾರದಲ್ಲಿ ಮೂರ್ನಾಲ್ಕು ಬಾರಿ ಯುವತಿಯನ್ನು ನಡುರಸ್ತೆಯಲ್ಲೇ ತಡೆದು ನಿಲ್ಲಿಸಿ ಕಿರುಕುಳ ನೀಡಿದ್ದ.ಇತ್ತೀಚೆಗೆ ಸಾರ್ವಜನಿಕವಾಗಿಯೇ ಯುವತಿಯನ್ನು ಹಿಂಬಾಲಿಸಿ ಬಂದು ಅನುಚಿತವಾಗಿ ಸ್ಪರ್ಶಿಸಿ ವಿಕೃತಿ ಮೆರೆದಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಂತಿಮವಾಗಿ ಜೈಲುಪಾಲು
ಸತತ ಕಿರುಕುಳದಿಂದ ಕಂಗಾಲಾದ ಯುವತಿ, ಅಂತಿಮವಾಗಿ ತನ್ನ ಪೋಷಕರೊಂದಿಗೆ ತೆರಳಿ ಬಾಗಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಚಂದ್ರಶೇಖರ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular