HomeIndiaBIG NEWS: ಗಗನಸಖಿ ಹತ್ಯೆ ಪ್ರಕರಣ; ಪೊಲೀಸ್ ಠಾಣೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಆರೋಪಿ

BIG NEWS: ಗಗನಸಖಿ ಹತ್ಯೆ ಪ್ರಕರಣ; ಪೊಲೀಸ್ ಠಾಣೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಆರೋಪಿ

ಮುಂಬೈ: ಗಗನಸಖಿ ರೂಪಾಲ್ ಹತ್ಯೆ ಪ್ರಕರಣದ ಆರೋಪಿ ವಿಕ್ರಮ್ ಅತ್ವಾಲ್ ಪೊಲೀಸ್ ವಶದಲ್ಲಿರುವಾಗಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆರೋಪಿ ವಿಕ್ರಮ್ ಅತ್ವಾಲ್ (40) ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದ ವಿಕ್ರಮ್ ಅತ್ವಾಲ್, ಶೌಚಾಲಯಕ್ಕೆ ತೆರಳಿದ್ದಾಗ ತನ್ನದೇ ಬಟ್ಟೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆ.4ರಂದು ರಾತ್ರಿ 24 ವರ್ಷದ ರೂಪಾಲ್ ಓಗ್ರಿ ಎಂಬ ಗಗನಸಖಿಯನ್ನು ಕತ್ತು ಸೀಳಿದ ರೀತಿಯಲ್ಲಿ ಬರ್ಬರವಾಗಿ ಕೊಲೆಯಾಗಿದ್ದರು. ರೂಪಾಲ್ ಉಳಿದುಕೊಂಡಿದ್ದ ಅಪಾರ್ಟ್ ಮೆಂಟ್ ನಲ್ಲಿ ಸ್ವಚ್ಛತಾ ಕಾರ್ಯ ಮಾಡುತ್ತಿದ್ದ ವಿಕ್ರಮ್ ಅತ್ವಾಲ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದರೆ ರೂಪಾಲ್ ಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಈ ಮಧ್ಯೆ ವಿಚಾರಣೆ ವೇಳೆಯೇ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೂಪಾಲ್ 6 ತಿಂಗಳ ಹಿಂದಷ್ಟೆ ಮುಂಬೈಗೆ ಬಂದು ತನ್ನ ಸಹೋದರಿ ಜೊತೆ ಮರೋಳ್ ನ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಏರ್ ಇಂಡಿಯಾ ಗಗನಸಖಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವೇ ದಿನಗಳಲ್ಲಿ ರೂಪಾಲ್ ಬರ್ಬರವಾಗಿ ಹತ್ಯೆಯಾಗಿದ್ದು ಪ್ರಕರಣದ ತನಿಖೆ ಮುಂದುವರೆದಿರುವಾಗಲೇ ಆರೋಪಿ ಸಾವಿಗೆ ಶರಣಾಗಿದ್ದಾನೆ.

For Latest News Updates, Join Our Whatsapp Community🚩
RELATED ARTICLES

Most Popular