ನವದೆಹಲಿ: ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಟಿಕೆಟ್ ಬುಕಿಂಗ್ ಮಾಡುವ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿಗಳಿಗೆ ಉಚಿತ ಮರುಹೊಂದಿಕೆ ರಿಶೆಡ್ಯೂಲಿಂಗ್ ಅಥವಾ ರದ್ದತಿಯ ಮೇಲೆ ಪೂರ್ಣ ಮರುಪಾವತಿ ನೀಡುವ ಆಫರ್ ನೀಡಲಾಗಿದೆ.
ಪಾಕಿಸ್ತಾನ ಹಾಗೂ ಪಿಒಕೆಯಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸದೆಬಡಿದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಈ ಘೋಷಣೆ ಮಾಡಿದೆ.
ದಾಳಿ ಹಿನ್ನೆಲೆಯಲ್ಲಿ ಕೆಲ ವಾಯುಮಾರ್ಗಗಳನ್ನು ಬಂದ್ ಮಾಡಲಾಗಿದೆ. ಇದರಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆ ಈ ನಿರ್ಧಾರ ಪ್ರಕಟಿಸಿದೆ.
ಮೇ 31ರವರೆಗೆ ಬುಕ್ ಮಾಡಲಾದ ರಕ್ಷಣಾ ಸಿಬ್ಬಂದಿಗೆ ಈ ಸೌಲಭ್ಯ ಮಾಡಿಕೊಡಲಾಗುವುದು. ಸೈನಿಕರ ಸೇವೆ ಬೆಂಬಲಿಸಲು ಟಿಕೆಟ್ ರದ್ದತಿಗೆ ಸಂಪೂರ್ಣ ಮರುಪಾವತಿಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದೆ.