HomeIndiaBIG NEWS: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ಮುಂಬೈನಿಂದ ಹೊರಟಿದ್ದ ವಿಮಾನ ವಾಪಾಸ್

BIG NEWS: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ಮುಂಬೈನಿಂದ ಹೊರಟಿದ್ದ ವಿಮಾನ ವಾಪಾಸ್

ನವದೆಹಲಿ: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಮುಂಬೈನಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಿಮಾನ ವಾಪಾಸ್ ಹಿಂತಿರುಗಿಸಲಾಗಿದೆ.

ವಿಮಾನವನ್ನು ದೆಹಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಪ್ರಯಾಣಿಕರು ಹಾಗೂ ಸಿಬ್ಬಂದಿಗಳ ಸುರಕ್ಷತೆ ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಿಂದ ನ್ಯೂಯಾರ್ಕ್ ನ ಜೆ ಎಫ್ ಕೆ ವಿಮಾನ ನಿಲ್ದಾಣಕ್ಕೆ ಹೊರಟಿದ್ದ AJ 119 ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ತಕ್ಷಣ ವಿಮಾನವನ್ನು ಹಿಂತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular