ನವದೆಹಲಿ: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ಪೈಲಟ್ ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಶ್ರೀನಗರದಿಂದ ದೆಹಲಿಗೆ ಬಂದ ಏರ್ ಇಂಡಿಯಾ ವಿಮಾನ ಲ್ಯಾಂಡ್ ಆದ ಕೆಲವೇ ಕ್ಷಣಗಳಲ್ಲಿ ಪೈಲಟ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಪೈಲಟ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ಅನಾರೋಗ್ಯದಿಂದ ಸಹೋದ್ಯೋಗಿಯನ್ನು ಕಳೆದುಕೊಂಡಿದ್ದೇವೆ. ಈ ಸಮಯದಲ್ಲಿ ಗೌಪ್ಯತೆಯನ್ನು ಗೌರವಿಸಿ ಅನಗತ್ಯ ವಿಚಾರಗಳು ಹರಡದಂತೆ ವಿನಂತಿಸುತ್ತೇವೆ. ಈ ಪ್ರಕ್ರಿಯೆಯಲ್ಲಿ ಎಲ್ಲಾ ರೀತಿಯ ನೆರವು ನೀಡಲು ಬದ್ಧರಾಗಿದ್ದೇವೆ ಎಂದು ಏರ್ ಇಂಡಿಯಾ ವಕ್ತಾರ ತಿಳಿಸಿದ್ದಾರೆ.