ಅಹಮದಾಬಾದ್: ಗುರುವಾರ ಮಧ್ಯಾಹ್ನ ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ. ಟೇಕ್ ಆಫ್ ಆಗುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ.
ಘಟನೆಯ ಸಮಯದಲ್ಲಿ ವಿಮಾನದಲ್ಲಿ 242 ಪ್ರಯಾಣಿಕರಿದ್ದರು, ಕನಿಷ್ಠ ಏಳು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತಲುಪಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ದುರಂತದ ಭಯಾನಕ ವೀಡಿಯೋ ವೈರಲ್ ಆಗಿದೆ.ಸಾವು ನೋವಿನ ಸಂಖ್ಯೆ ಇನ್ನಷ್ಟೇ ತಿಳಿದು ಬರಬೇಕಿದೆ.

