HomeLatest NewsBIG NEWS: ಏರ್ ಇಂಡಿಯಾ ಟೇಕಾಫ್ ವೇಳೆ ತಾಂತ್ರಿಕ ದೋಷ: ಸ್ವಲ್ಪದರಲ್ಲಿ ತಪ್ಪಿದ ಅನಾಹುತ

BIG NEWS: ಏರ್ ಇಂಡಿಯಾ ಟೇಕಾಫ್ ವೇಳೆ ತಾಂತ್ರಿಕ ದೋಷ: ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವೊಂದರಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಟೇಕಾಫ್ ಆಗುವ ಮೊದಲೇ ಗೊತ್ತಾದ ಹಿನ್ನೆಲೆಯಲ್ಲಿ ಅನಾಹುತವೊಂದು ತಪ್ಪಿದಂತಾಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್ ನ ಹಿಂಡನ್ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಟೇಕಾಫ್ ಗೂ ಸ್ವಲ್ಪ ಮೊದಲು ತಾಂತ್ರಿಕ ದೋಷ ಕಾಣಿಸಿದ್ದು, ತಕ್ಷಣ ಪೈಲಟ್, ವಿಮಾನ ಸಿಬ್ಬಂದಿಗಳು ಎಚ್ಚುತ್ತುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನ ರನ್ ವೇಯಲ್ಲಿದ್ದಾಗ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಹಾಗಾಗಿ ವಿಮಾನ ಹಾರಾಟ ಒಂದುಗಂಟೆ ವಿಳಂಬವಾಯಿತು. ಇದರಿಂದ ಪ್ರಯಾಣಿಕರಿಗೆ ಉಂಟದ ಅನಾನುಕೂಲಕ್ಕೆ ಏರ್ ಇಂಡಿಯಾ ಕ್ಷಮೆ ಕೋರಿದೆ. ಪ್ರಯಾಣಿಕರಿಗೆ ಉಚಿತ ಟಿಕೆಟ್ ಮರುಹೊಂದಿಕೆ ಅಥವಾ ರದ್ದತಿಯನು ಪೂರ್ಣ ಮರುಪಾವತಿಯೊಂದಿಗೆ ಮಾಡಿಕೊಡಲಾಗಿದೆ ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular