ಗುಜರಾತ್ : ಅಹಮದಾಬಾದ್ ಏರ್ ಪೋರ್ಟ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿದ್ದು, ಕನಿಷ್ಠ 40 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.
ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತ ಘಟನೆಯಲ್ಲಿ ಇದುವರೆಗೆ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ. ಪೈಲಟ್ ಸೇರಿ 242 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಏರ್ ಪೋರ್ಟ್ ನಲ್ಲಿ ಟೇಕ್ ಆಫ್ ಆದ 1 ನಿಮಿಷದಲ್ಲಿ ಪತನಗೊಂಡಿದೆ.
242 ಪ್ರಯಾಣಿಕರು ಮತ್ತು 12 ಸಿಬ್ಬಂದಿಯೊಂದಿಗೆ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿತು. ಪ್ರಾಥಮಿಕ ವರದಿಗಳ ಪ್ರಕಾರ, ಅಪಘಾತದಲ್ಲಿ 40 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.:
ಅಹಮದಾಬಾದ್ನಲ್ಲಿ ನಡೆದ ವಿಮಾನ ಅಪಘಾತದ ಬಗ್ಗೆ ರಿತೇಶ್ ದೇಶಮುಖ್ ಆಘಾತ ವ್ಯಕ್ತಪಡಿಸಿದ್ದಾರೆ. ಈ ಘಟನೆ ತಮ್ಮನ್ನು ಸಂಪೂರ್ಣವಾಗಿ ದುಃಖಿತರನ್ನಾಗಿಸಿದೆ ಎಂದು ಉಲ್ಲೇಖಿಸಿದ್ದಾರೆ. ಈ ದುರಂತ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ದೇಶಮುಖ್ ಸಂತಾಪ ಸೂಚಿಸಿದ್ದಾರೆ.
Prime Minister Narendra Modi spoke to the Minister of Civil Aviation, Rammohan Naidu, and took stock of the Air India flight crash incident in Ahmedabad. The Minister informed the Prime Minister that he is rushing to Ahmedabad to oversee rescue and relief operations on the… pic.twitter.com/PiSPkKNs81
— ANI (@ANI) June 12, 2025
#WATCH | Relief and rescue efforts are underway at the site of Air India plane crash in Ahmedabad
— ANI (@ANI) June 12, 2025
Union Home Minister Amit Shah has spoken to the Gujarat CM and promised all Central assitance pic.twitter.com/PqsaCsnFKd
ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ಸುಮಾರು 232 ಪ್ರಯಾಣಿಕರು ವಿಮಾನದಲ್ಲಿದ್ದರು ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ.
ವಿಮಾನವು ಮಧ್ಯಾಹ್ನ 1.17 ಕ್ಕೆ ಲಂಡನ್ಗೆ ಹೊರಟಾಗ ಈ ಘಟನೆ ಸಂಭವಿಸಿದೆ . ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ಭಾರೀ ಹೊಗೆ ಗೋಚರಿಸುತ್ತಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗುತ್ತಿದೆ. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಅಪಘಾತದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಮಾತನಾಡಿದರು. ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಶೀಘ್ರದಲ್ಲೇ ಅಹಮದಾಬಾದ್ನಲ್ಲಿರುವ ಅಪಘಾತ ಸ್ಥಳಕ್ಕೆ ತಲುಪಲಿದ್ದಾರೆ.
Plan crash in Ahmedabad…! pic.twitter.com/pkP6pLW0vb
— DIVYESH HIRPARA (@hirparadivyesh) June 12, 2025