ಏರ್ ಇಂಡಿಯಾ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಹೋಟೆಲ್ ರೂಮ್ ಗೆ ನುಗ್ಗಿ ಕೃತ್ಯ

ಏರ್ ಇಂಡಿಯಾ ಮಹಿಳಾ ಸಿಬ್ಬಂದಿಯ ಮೇಲೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಲಂಡನ್ ನ ಹೋಟೆಲ್ ನಲ್ಲಿ ತಂಗಿದ್ದ ಏರ್ ಇಂಡಿಯಾ ಮಹಿಳಾ ಸಿಬ್ಬಂದಿ ಮೇಲೆ ಈ ಕೃತ್ಯವೆಸಗಲಾಗಿದೆ. ಹೋಟೆಲ್ ರೂಮ್ ಗೆ ನುಗ್ಗಿದ ವ್ಯಕ್ತಿಯೋರ್ವ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ. ಸದ್ಯ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಏರ್ ಇಂಡಿಯಾ ಕೂಡ ಮಾಹಿತಿ ನೀಡಿದ್ದು, ರಾತ್ರಿ ಲಂಡನ್ ಹೋಟೆಲ್ ನಲ್ಲಿ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯೊಬ್ಬರ ಮೇಲೆ ಅಪರಿಚಿತ ವ್ಯಕ್ತಿ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆ ನಡೆಸಿದ್ದಾನೆ. ಲಂಡನ್ ನ ಹಿಥ್ರೂನಲ್ಲಿರುವ ರಾಡಿಸನ್ ರೆಡ್ ಹೋಟೆಲ್ ನಲ್ಲಿ ಏರ್ ಇಂಡಿಯಾದ ಹಲವು ಸಿಬ್ಬಂದಿಗಳು ತಂಗಿದ್ದರು. ಈ ವೇಳೆ ಹೋಟೆಲ್ ರೂಮ್ ನಲ್ಲಿ ಮಹಿಳಾ ಸಿಬ್ಬಂದಿ ಮಲಗಿದ್ದ ವೇಳೆ ರಾತ್ರಿ 1:30ರ ಸುಮಾರಿಗೆ ಏಕಾಏಕಿ ನುಗ್ಗಿದ ವ್ಯಕ್ತಿ ಮಹಿಳಾ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಮಹಿಳಾ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲಿಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read