ತಿರುವನಂತಪುರಂ: ಟೇಕಾಫ್ ಆದ ಕೆಲವೇ ಸಮಯದಲ್ಲಿ ಏರ್ ಇಂಡಿಯಾ ವಿಮಾನ ಮತ್ತೆ ವಾಪಾಸ್ ಆದ ಘಟನೆ ಕೇರಳದ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಕೋಝಿಕ್ಕೋಡ್ ನಿಂದ ದೋಹಾಗೆ ಹೊರಟಿದ್ದ ಏರ್ ಇಂಡಿಯಾ ಬೋಯಿಂಗ್ 737 ವಿಮಾನ ಬೆಳಿಗ್ಗೆ 9:17ಕ್ಕೆ ಟೇಕಾಫ್ ಆಗಿತ್ತು. ಆದರೆ ಕೆಅಲ ಸಮಯದಲ್ಲೇ ಮತ್ತೆ ಕೋಝಿಕ್ಕೋಡ್ ವಿಮಾನ ನಿಲ್ದಾಣಕ್ಕೆ ವಾಪಾಸ್ ಆಗಿದ್ದು, ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ.
ತಾಂತ್ರಿಕ ದೋಷದ ಕಾರಣಕ್ಕೆ ವಿಮಾನ ಹಿಂದಿರುಗಿದ್ದು, ಪ್ರಯಾಣಿಕರನ್ನು ಸುರಕ್ಷತಾವಿ ಕೆಳಗಿಳಸಾಲಾಗಿದೆ. ಬಳಿಕ ಪ್ರಯಾಣಿಕರಿಗೆ ಬೇರೊಂದು ವಿಮಾನದ ಮೂಲಕ ದೋಹಾಗೆ ತೆರಳಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.