ಬೆಂಗಳೂರು: ವಿಮಾನ ಹತ್ತುವಾಗ ಪ್ರಯಾಣಿಕರೊಬ್ಬರು ಏಕಏಕಿ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಏರ್ ಪೋರ್ಟ್ ಟರ್ಮಿನಲ್ 1ರಲ್ಲಿ ಈ ಘಟನೆ ನಡೆದಿದೆ. ವಿಮಾನ ಹತ್ತಲು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ, ತಕ್ಷಣ ಏರ್ ಪೋರ್ಟ್ ಸಿಬ್ಬಂದಿ ಪ್ರಯಾಣಿಕನಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.