ಬೆಂಗಳೂರು : ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಹಾಗೂ ಬೀದರ್ , ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳ ಹಲವು ಕಡೆ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನ ಹಲವು ಕಡೆ ನಿನ್ನೆ ಭಾರಿ ಮಳೆಯಾಗಿದೆ . ವಿಧಾನಸೌಧ, ಕೆ ಆರ್ ಸರ್ಕಲ್, ಕಾರ್ಪೊರೇಷನ್ ಸರ್ಕಲ್, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗಿದೆ..
ವಾಯುಭಾರ ಕುಸಿತ ಪರಿಣಾಮ ರಾಜ್ಯದ ಕೆಲವು ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಸೆ. 6ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸೆಪ್ಟೆಂಬರ್ ನಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.