HomeLatest NewsRain alert Karnataka : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಏ.29 ರವರೆಗೂ...

Rain alert Karnataka : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಏ.29 ರವರೆಗೂ ಗುಡುಗು ಸಹಿತ ಭಾರಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು : ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಏ.29 ರವರೆಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕೊಡಗು ಹಾಗೂ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏ.29 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ, ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಏ.29 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular