ವಾಯುಸೇನೆ ವಿಮಾನಗಳ ಡಿಕ್ಕಿಯಲ್ಲಿ ಬೆಳಗಾವಿಯ ವಿಂಗ್ ಕಮಾಂಡರ್ ಹನುಮಂತರಾವ್ ಹುತಾತ್ಮ: ರಕ್ಷಣಾ ಸಚಿವರ ಸಂತಾಪ

ಬೆಳಗಾವಿ: ವಾಯುಸೇನೆ ಜೆಟ್ ಗಳ ನಡುವೆ ಡಿಕ್ಕಿಯಾಗಿ ಸಂಭವಿಸಿದ ದುರಂತದಲ್ಲಿ ಬೆಳಗಾವಿಯ ಯೋಧ ಹುತಾತ್ಮರಾಗಿದ್ದಾರೆ.

ವಿಂಗ್ ಕಮಾಂಡರ್ ಹನುಮಂತರಾವ್ ಆರ್. ಸಾರಥಿ ಹುತಾತ್ಮರಾದವರು. ಅವರು ಬೆಳಗಾವಿಯ ಗಣೇಶಪುರದ ನಿವಾಸಿಯಾಗಿದ್ದಾರೆ. ಮಧ್ಯಪ್ರದೇಶದ ಮೊರೆನಾದಲ್ಲಿ ಎರಡು ಜೆಟ್ ಗಳ ನಡುವೆ ಡಿಕ್ಕಿಯಾಗಿತ್ತು.

ಹನುಮಂತರಾವ್ ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಹನುಮಂತರಾವ್ ನಿವಾಸಕ್ಕೆ ವಾಯುಸೇನೆ ತರಬೇತಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಅವರ ನಿವಾಸದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಹನುಮಂತರಾವ್ ನಿಧನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ. ಗ್ವಾಲಿಯರ್ ಬಳಿ ಅಪಘಾತದ ಸಂದರ್ಭದಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದ ವೀರ ವಾಯುಯೋಧ, Wg Cdr ಹನುಮಂತ್ ರಾವ್ ಸಾರಥಿ ಅವರನ್ನು ಕಳೆದುಕೊಂಡಿದ್ದರಿಂದ ತೀವ್ರ ದುಃಖವಾಗಿದೆ. ಅವರನ್ನು ಅಗಲಿದ ಕುಟುಂಬಕ್ಕೆ ನನ್ನ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ನಾವು ಅವರ ಕುಟುಂಬದ ಬೆಂಬಲಕ್ಕೆ ನಿಂತಿದ್ದೇವೆ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

https://twitter.com/rajnathsingh/status/1619308798757470208

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read