ನವದೆಹಲಿ: ವಿಮಾನ ನಿಲ್ದಾಣದಲ್ಲಿಯೇ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನವದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 3ರಲ್ಲಿ ಏರ್ ಇಂಡಿಯಾ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬಸ್ ಧಗಧಗನೆ ಹೊತ್ತಿ ಉರಿದಿದೆ.
ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಿದ್ದಾರೆ. ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದಾಗ ಬಸ್ ನಲ್ಲಿ ಪ್ರಯಾಣಿಕರು ಇರಲಿಲ್ಲ. ಇದರಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
