HomeKarnatakaBIG BREAKING: ಬಸವೇಶ್ವರ, ಚನ್ನಮ್ಮ, ರಾಯಣ್ಣ, ಕುವೆಂಪು ಏರ್ ಪೋರ್ಟ್; ರಾಜ್ಯದ 4 ವಿಮಾನ ನಿಲ್ದಾಣಗಳಿಗೆ...

BIG BREAKING: ಬಸವೇಶ್ವರ, ಚನ್ನಮ್ಮ, ರಾಯಣ್ಣ, ಕುವೆಂಪು ಏರ್ ಪೋರ್ಟ್; ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರಿಡಲು ವಿಧಾನಸಭೆ ಒಪ್ಪಿಗೆ

ಬೆಳಗಾವಿ: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಹತ್ವದ ನಿರ್ಣಯ ಅಂಗೀಕರಿಸಲಾಗಿದೆ.

ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ. ಪಾಟೀಲ ಮಸೂದೆ ಮಂಡಿಸಿದ್ದಾರೆ. ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ನಾಮಕರಣ ಮಾಡಲು ನಿರ್ಣಯಿಸಿದ್ದು, ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular