ವೆಸ್ಟ್ ಬ್ಯಾಂಕ್ ನಲ್ಲಿ ಏರ್’ಸ್ಟ್ರೈಕ್ : ಫೆಲೆಸ್ತೀನ್ ಇಸ್ಲಾಮಿಕ್ ಜಿಹಾದ್ ಮುಖ್ಯಸ್ಥನ ಹತ್ಯೆ.!

ಪಶ್ಚಿಮ ದಂಡೆಯ ನೂರ್ ಶಮ್ಸ್ ನಿರಾಶ್ರಿತರ ಶಿಬಿರದ ಮೇಲೆ ಗುರುವಾರ ನಡೆದ ವೈಮಾನಿಕ ದಾಳಿಯಲ್ಲಿ ಫೆಲೆಸ್ತೀನ್ ಇಸ್ಲಾಮಿಕ್ ಜಿಹಾದ್ ಭಯೋತ್ಪಾದಕ ಗುಂಪಿನ ಮುಖ್ಯಸ್ಥನನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಘೋಷಿಸಿದೆ.

ಆಗಸ್ಟ್ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮುಹಮ್ಮದ್ ಜಬ್ಬರ್ ಸಾವನ್ನಪ್ಪಿದ ನಂತರ ಮುಹಮ್ಮದ್ ಅಬ್ದುಲ್ಲಾ ಅವರನ್ನು ತುಲ್ಕರೆಮ್ ಪ್ರದೇಶದ ಶಿಬಿರದಲ್ಲಿ ಇರಾನ್ ಬೆಂಬಲಿತ ಭಯೋತ್ಪಾದಕ ಗುಂಪಿನ ಮುಖ್ಯಸ್ಥರನ್ನಾಗಿ ಮಾಡಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ತಿಳಿಸಿದೆ.

ಐಡಿಎಫ್ ಪ್ರಕಾರ, ವೈಮಾನಿಕ ದಾಳಿಯಲ್ಲಿ ಅಬ್ದುಲ್ಲಾ ಅವರೊಂದಿಗೆ ಇನ್ನೊಬ್ಬ ಭಯೋತ್ಪಾದಕ ಸಹ ಕೊಲ್ಲಲ್ಪಟ್ಟಿದ್ದಾನೆ. ಆದರೆ, ಎರಡನೇ ಭಯೋತ್ಪಾದಕನ ಹೆಸರನ್ನು ಅದು ಉಲ್ಲೇಖಿಸಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read