HomeLatest NewsBREAKING NEWS: ಐಶ್ವರ್ಯಾ ಗೌಡಗೆ ಜಾಮೀನು ಮಂಜೂರು

BREAKING NEWS: ಐಶ್ವರ್ಯಾ ಗೌಡಗೆ ಜಾಮೀನು ಮಂಜೂರು

ಬೆಂಗಳೂರು: ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಐಶ್ವರ್ಯಾ ಗೌಡಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪಿಎಂಎಲ್ ಎ ಪ್ರಕರಣದಲ್ಲಿ ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯ ಐಶ್ವರ್ಯಾ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅನುಸೂಚಿತ ಪ್ರಕರಣವಿಲ್ಲದಿದ್ದರೂ ಇಡಿ ಬಂಧನ ಮಾಡಿದೆ. ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ ಎಂದು ಐಶ್ವರ್ಯಾ ಗೌಡ ಪರ ವಕೀಲಎಸ್.ಸುನೀಲ್ ಕುಮಾರ್ ವಾದ ಮಂಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾದ-ಪ್ರತಿವಾದ ಆಲಿಸಿದ ಸೆಷನ್ ಕೋರ್ಟ್, ಐಶ್ವರ್ಯಾ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಇಡಿ ಮಾಜಿ ಸಂಸದ ಡಿ.ಕೆ.ಸುರೇಶ್ ಗೆ ಸಮನ್ಸ್ ಜಾರಿ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular