HomeKarnatakaರಮ್ಯಾ, ವಿಜಯಲಕ್ಷ್ಮೀ ಬಳಿಕ ಐಶ್ವರ್ಯಾ ಸಿಂಧೋಗಿಗೆ ಅಶ್ಲೀಲ ಕಮೆಂಟ್: ದೂರು ದಾಖಲಿಸಿದ ಸ್ಯಾಂಡಲ್ ವುಡ್ ನಟಿ

ರಮ್ಯಾ, ವಿಜಯಲಕ್ಷ್ಮೀ ಬಳಿಕ ಐಶ್ವರ್ಯಾ ಸಿಂಧೋಗಿಗೆ ಅಶ್ಲೀಲ ಕಮೆಂಟ್: ದೂರು ದಾಖಲಿಸಿದ ಸ್ಯಾಂಡಲ್ ವುಡ್ ನಟಿ

ಬೆಂಗಳೂರು: ಪೊಲೀಸ್ ಇಲಾಖೆ, ಮಹಿಳಾ ಆಯೋಗ ಎಷ್ಟೇ ಎಚ್ಚರಿಕೆ ನೀಡಿದರೂ ಚಂದನವನದ ನಟಿಯರಿಗೆ ಕಿಡಿಗೇಡಿಗಳು ಅಶ್ಲೀಲವಾಗಿ, ಅವಹೇಳನಕಾರಿಯಾಗಿ ಕಮೆಂಟ್ ಮಾಡುವ ಕೃತ್ಯ ನಿಲ್ಲಿಸಿಲ್ಲ. ನಟಿ ರಮ್ಯಾ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಳಿಕ ಇದೀಗ ನಟಿ ಐಶ್ವರ್ಯಾ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಮೆಂಟ್ ಮಾಡಲಾಗಿದೆ.

ಅಶ್ಲೀಲ ಕಮೆಂಟ್ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ನಟಿ ರಮ್ಯಾಅ ಹಾಗೂ ವಿಜಯಲಕ್ಷ್ಮೀ ದರ್ಶನ್ ಕೇಸ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಆರೋಪಿಗಳು ಅರೆಸ್ಟ್ ಕೂಡ ಆಗಿದ್ದಾರೆ. ಆದರೂ ಕಿಡಿಗೇಡಿಗಳು, ಕೆಲ ವಿಲಕ್ಷಣ ಮನಸ್ಥಿತಿಯುಳ್ಳವರು ಬುದ್ಧಿ ಮಾತ್ರ ಕಲಿತಿಲ್ಲ. ಈಗ ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದು, ಇದರಿಂದ ಬೇಸತ್ತ ನಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಟಿ ಐಶ್ವರ್ಯ ಸಿಂಧೋಗಿ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಅಪ್‌ಲೋಡ್ ಮಾಡಿರುವ ಪೋಸ್ಟ್‌ಗಳಿಗೆ ಸತತವಾಗಿ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಕಮೆಂಟ್‌ಗಳನ್ನು ಮಾಡಲಾಗುತ್ತಿದೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮಗೆ ಪರಿಚಯವಿರುವ ವ್ಯಕ್ತಿಯೊಬ್ಬರ ಹೆಸರನ್ನು ಉಲ್ಲೇಖಿಸಿ ದೂರು ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ಕೂಡ ಇದೇ ವ್ಯಕ್ತಿ ಐಶ್ವರ್ಯಾಗೆ ಬೆದರಿಕೆ ಹಾಕಿದ್ದರು. ಆ ವೇಳೆ ಕೇಸ್ ದಾಖಲಾಗಿತ್ತು. ಈಗ ಅದೇ ವ್ಯಕ್ತಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಅವುಗಳ ಮೂಲಕ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ತಮಗೆ ತೊಂದರೆ ನೀಡುತ್ತಿರುವ ಆ ನಕಲಿ ಖಾತೆಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಐಶ್ವರ್ಯಾ ಮನವಿ ಮಾಡಿದ್ದಾರೆ. ನಟಿಯ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಸದ್ಯ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular