HomeKarnatakaಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕಲ್ಯಾಣ ಕರ್ನಾಟಕದಲ್ಲಿ 2618 ಅತಿಥಿ ಶಿಕ್ಷಕರ ನೇಮಕಾತಿ

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕಲ್ಯಾಣ ಕರ್ನಾಟಕದಲ್ಲಿ 2618 ಅತಿಥಿ ಶಿಕ್ಷಕರ ನೇಮಕಾತಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 2618 ಅತಿಥಿ ಶಿಕ್ಷಕರ ನೇಮಕಾತಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುದಾನ ನೀಡಿ ಮಂಜುರಾತಿ ಆದೇಶ ನೀಡಲಾಗಿದೆ.

ಪ್ರಾಥಮಿಕ ಶಾಲೆಯ ಅಕ್ಷರ ಮಿತ್ರ ಅತಿಥಿ ಶಿಕ್ಷಕರಿಗೆ 10,000 ರೂ., ಪ್ರೌಢಶಾಲೆ ಅಕ್ಷರ ಮಿತ್ರ ಅತಿಥಿ ಶಿಕ್ಷಕರಿಗೆ 10,500 ರೂ. ಗೌರವ ಧನ ನೀಡಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಮಂಡಳಿ ಕಚೇರಿಯಲ್ಲಿ ಶಿಕ್ಷಣ ಇಲಾಖೆ ಅಪಾರ ಆಯುಕ್ತ ಡಾ. ಆಕಾಶ್ ಅವರಿಗೆ ಮಂಜೂರಾತಿ ಆದೇಶ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸರ್ಕಾರ ಕಾಯಂ ಮತ್ತು ಅತಿಥಿ ಶಿಕ್ಷಕರನ್ನು ನೇಮಕ ಮಾಡಿದ ನಂತರವೂ ಶಿಕ್ಷಕರ ಕೊರತೆ ಕಂಡು ಬಂದಿದೆ. ಹೆಚ್ಚುವರಿಯಾಗಿ ಬೇಡಿಕೆ ಇರುವ 2618 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆಗೆ ಮಂಜೂರಾತಿ ಆದೇಶ ನೀಡಲಾಗಿದ್ದು, ಇದಕ್ಕಾಗಿ 18.34 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಅಜಯ್ ಸಿಂಗ್ ತಿಳಿಸಿದ್ದಾರೆ.

ಮಂಡಳಿಯಿಂದ ಈ ಬಾರಿ ಶಿಕ್ಷಣಕ್ಕೆ ಶೇಕಡ 25 ರಷ್ಟು ಅನುದಾನ ಮೀಸಲಿಡಲಿದ್ದು, ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲಾಗುವುದು. ಯಾವ ಶಾಲೆಗಳಲ್ಲಿಯೂ ಶಿಕ್ಷಕರ ಕೊರತೆ ಎದುರಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular