HomeKarnatakaಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಶೀಲ್ದಾರ್ ಅಜಿತ್ ರೈಗೆ ಜಾಮೀನು

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಶೀಲ್ದಾರ್ ಅಜಿತ್ ರೈಗೆ ಜಾಮೀನು

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಕೆಆರ್ ಪುರ ತಾಲೂಕು ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್ ರೈ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಸಿಟಿ ಸಿವಿಲ್ ಸೆಷನ್ ಕೋರ್ಟ್ -23ರ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಜಾಮೀನು ಕೋರಿ ಅಜಿತ್ ರೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದಾರೆ. ಅಜಿತ್ ರೈ ಪರ ವಾದ ಮಂಡಿಸಿದ ಹೈಕೋರ್ಟ್ ಹಿರಿಯ ವಕೀಲ ಎಂ.ಎಸ್. ಶ್ಯಾಮಸುಂದರ್, ಅರ್ಜಿದಾರರ ಪತ್ನಿ ತೀವ್ರ ಅನಾರೋಗ್ಯಕ್ಕೆ ತುತ್ತಾದ ಕಾರಣ ಅವರ ಚಿಕಿತ್ಸೆಯ ದೃಷ್ಟಿಯಿಂದ ಜಾಮೀನು ಮಂಜೂರು ಮಾಡುವಂತೆ ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾದ ಆಲಿಸಿದ ನ್ಯಾಯಾಧೀಶರು, ಆರೋಪಿ 5 ಲಕ್ಷ ರೂ. ಮೊತ್ತದ ಬಾಂಡ್, ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು. ತನಿಖಾಧಿಕಾರಿಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular