ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಹಿನ್ನೆಲೆ ಕೆ.ಆರ್.ಪುರಂ ತಹಶೀಲ್ದಾರ್ ‘ಅಜಿತ್ ರೈ’ ಬಂಧನವಾಗಿದೆ.
ನಗರದ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 40 ಲಕ್ಷಕ್ಕೂ ಹೆಚ್ಚು ನಗದು ಸೇರಿದಂತೆ ವಿವಿಧ ಅಕ್ರಮ ಆಸ್ತಿಗಳನ್ನು ಪತ್ತೆ ಹಚ್ಚಿದ್ದರು.
ಸದ್ಯ, ತಹಶೀಲ್ದಾರ್ ‘ಅಜಿತ್ ರೈ’ ಬಂಧಿಸಿರುವ ಪೊಲೀಸರು 24 ಗಂಟೆಯೊಳಗಾಗಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.
ನಿನ್ನೆ ಬೆಳಗ್ಗೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, ರಾತ್ರಿ ಅಜಿತ್ ರೈ ಮನೆಯಲ್ಲೇ ಠಿಕಾಣಿ ಹೂಡಿದ್ದರು. ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಸಿಕ್ಕಿದ್ದವು , ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು, ಆಪ್ತರ ಮನೆಯಲ್ಲಿ ನಾಲ್ಕು ಫಾರ್ಚೂನರ್ ಕಾರುಗಳು ಪತ್ತೆಯಾಗಿವೆ. ಅಜಿತ್ ಆಸ್ತಿಪತ್ರಗಳನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದರು.
You Might Also Like
TAGGED:ajith rai arretsed