HomeKarnatakaBREAKING NEWS : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು

BREAKING NEWS : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಅಜಿತ್ ರೈ ಅಮಾನತು ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.

ಜೂನ್ 28 ರಂದು ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ದಾಳಿ ವೇಳೆ ಅಕ್ರಮ ಆಸ್ತಿ, ಲಕ್ಷಾಂತರ ರೂ ಹಣ ಪತ್ತೆಯಾಗಿತ್ತು. ನಗರದ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 40 ಲಕ್ಷಕ್ಕೂ ಹೆಚ್ಚು ನಗದು ಸೇರಿದಂತೆ ವಿವಿಧ ಅಕ್ರಮ ಆಸ್ತಿಗಳನ್ನು ಪತ್ತೆ ಹಚ್ಚಿದ್ದರು. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಸಿಕ್ಕಿದ್ದವು , ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು, ಅಲ್ಲದೇ ಆಪ್ತರ ಮನೆಯಲ್ಲಿ ನಾಲ್ಕು ಫಾರ್ಚೂನರ್ ಕಾರುಗಳು ಪತ್ತೆಯಾಗಿತ್ತು . ಅಜಿತ್ ಆಸ್ತಿಪತ್ರಗಳನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದರು.

ಬಳಿಕ ತಹಶೀಲ್ದಾರ್ ‘ಅಜಿತ್ ರೈ’ ಬಂಧಿಸಿದ್ದ ಪೊಲೀಸರು ನಂತರ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಅಜಿತ್ ರೈಯನ್ನು ಜುಲೈ 6 ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular