ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನ: ಸಿಎಂ ಸಂತಾಪ

ಬೆಂಗಳೂರು: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೆ ತಯಾರಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಸಿಂಪಾಡಿಪುರದ ಪೆನ್ನ ಓಬಳಯ್ಯ(105) ಭಾನುವಾರ ರಾತ್ರಿ ನಿಧನರಾಗಿದ್ದಾರೆ.

ಅವರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸೋಮವಾರ ಮಧ್ಯಾಹ್ನ ಸಿಂಪಾಡಿಪುರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ನವೆಂಬರ್ 1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಾನಪದ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪೆನ್ನ ಓಬಳಯ್ಯ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ವೀಣೆ ತಯಾರಿಕೆ ಕಲೆಯನ್ನು ಕಲಿತು ಜೀವನದ ಉದ್ದಕ್ಕೂ ಮಾಡಿಕೊಂಡು ಬಂದಿದ್ದ ಪೆನ್ನ ಓಬಳಯ್ಯ ಈ ಕಲೆಯನ್ನು ತಿಳಿದ ಏಕೈಕ ವ್ಯಕ್ತಿಯಾಗಿದ್ದರು. ಕಾಲಕ್ರಮೇಣ ಆಸಕ್ತರಿಗೆ ಈ ಕುಶಲ ಕಲೆಯನ್ನು ಕಲಿಸಿದ್ದಾರೆ. ಸಿಂಪಾಡಿಪುರದ ಶೇಕಡ 90ರಷ್ಟು ಜನರು ವೀಣೆ ತಯಾರಿಕೆಯಲ್ಲಿ ತೊಡಗಿದ್ದಾರೆ. ಇದೇ ಗ್ರಾಮದ ಆರ್ಥಿಕ ಮೂಲವಾಗಿದೆ.

ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರ ನಿಧನ ಅತೀವ ದುಃಖ ತಂದಿದೆ. ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಸಮೀಪದ ಸಿಂಪಾಡಿಪುರದ ನಿವಾಸಿಯಾಗಿದ್ದ ಓಬಳಯ್ಯ ಅವರು ಇಡೀ ದೇಶಕ್ಕೆ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದವರು. ಜೊತೆಗೆ ಆಸಕ್ತರಿಗೆ ವೀಣೆ ತಯಾರಿಕೆಯ ಕೌಶಲ್ಯವನ್ನು ಕಲಿಸಿ, ಸಾಂಪ್ರದಾಯಿಕ ಸಾಹಿತ್ಯದ ನಿರಂತರತೆಯನ್ನು ಕಾಪಾಡುವಲ್ಲಿ ಶ್ರಮಿಸಿದ್ದರು. ಹಿರಿಯ ಜೀವ ಓಬಳಯ್ಯನವರ ಅಗಲಿಕೆಯಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತನಲ್ಲಿ‌ ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read