HomeBusinessವಿಮಾನಯಾನ ದುಬಾರಿ: ಟಿಕೆಟ್ ದರ ಹೆಚ್ಚಳ ಘೋಷಿಸಿದ ಆಕಾಶ್ ಏರ್

ವಿಮಾನಯಾನ ದುಬಾರಿ: ಟಿಕೆಟ್ ದರ ಹೆಚ್ಚಳ ಘೋಷಿಸಿದ ಆಕಾಶ್ ಏರ್

ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಕಾರಣ ವಿಮಾನ ಇಂಧನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಈ ಬೆಲೆ ಏರಿಕೆಯನ್ನು ವಿವಿಧ ವಿಮಾನಯಾನ ಕಂಪನಿಗಳು ಜನರ ಮೇಲೆ ಹಾಕುತ್ತಿವೆ. ಇಂಡಿಗೋ ಮತ್ತು ಏರ್ ಇಂಡಿಯಾ ಬಳಿಕ ಈಗ ಆಕಾಶ್ ಏರ್ ಹೊಸ ಇಂಧನ ಸರ್‌ಚಾರ್ಜ್ ವಿಧಿಸುವ ನಿರ್ಧಾರ ಘೋಷಣೆ ಮಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ಆಕಾಶ್ ಏರ್ ಈ ಕುರಿತು ಪೋಸ್ಟ್ ಹಾಕಿದೆ. ಮಧ್ಯಪ್ರಾಚ್ಯದಲ್ಲಿ ಉಂಟಾಗುತ್ತಿರುವ ಭೌಗೋಳಿಕ ರಾಜಕೀಯ ವಿದ್ಯಮಾನಗಳಿಂದಾಗಿ ವಿಮಾನ ಇಂಧನದ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ ಎಂದು ಹೇಳಿದೆ.

ವಿಮಾನಯಾನ ಸಂಸ್ಥೆಗಳ ಒಟ್ಟು ನಿರ್ವಹಣಾ ವೆಚ್ಚದಲ್ಲಿ ಇಂಧನವೇ ಬಹು ದೊಡ್ಡ ಪಾಲನ್ನು ಹೊಂದಿರುವುದರಿಂದ, ಇದು ಇಡೀ ವಿಮಾನಯಾನ ಉದ್ಯಮದ ಮೇಲೆ ಪ್ರಭಾವ ಬೀರಿದೆ ಎಂದು ವಿವರಣೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಆಕಾಶ್ ಏರ್ ಸಂಸ್ಥೆಯು ತನ್ನ ದೇಶೀಯ ಮತ್ತು ಅಂತರಾಷ್ಟ್ರೀಯ ಮಾರ್ಗಗಳಲ್ಲಿ ರೂ. 199 ರಿಂದ ರೂ. 1,300ರ ತನಕ ಇಂಧನ ಸರ್ಚಾರ್ಜ್ ವಿಧಿಸಲು ನಿರ್ಧರಿಸಿದೆ ಎಂದು ಘೋಷಣೆ ಮಾಡಿದೆ.

ಮಾರ್ಚ್ 15, 2026ರ ಮಧ್ಯರಾತ್ರಿ 1 ಗಂಟೆಯ ನಂತರ ಮಾಡುವ ಎಲ್ಲಾ ಬುಕಿಂಗ್‌ಗಳಿಗೆ ಇದು ಅನ್ವಯಿಸುತ್ತದೆ. ಈ ಸಮಯಕ್ಕಿಂತ ಮೊದಲು ಮಾಡಿದ ಬುಕಿಂಗ್‌ಗಳಿಗೆ ಯಾವುದೇ ಹೆಚ್ಚುವರಿ ಶುಲ್ಕವಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಇಂಧನ ಸರ್ಚಾರ್ಜ್ ಅನ್ನು ಪ್ರತಿ ಸೆಕ್ಟರ್‌ಗೆ ಅನ್ವಯಿಸಲಾಗುತ್ತದೆ ಮತ್ತು ವಿಮಾನದ ಪ್ರಯಾಣದ ಅವಧಿಗೆ ಅನುಗುಣವಾಗಿ ಇದು ಬದಲಾಗುತ್ತದೆ. ಉತ್ತಮ ಗ್ರಾಹಕ ಸೇವೆ, ವಿಶ್ವಾಸಾರ್ಹ ಕಾರ್ಯಾಚರಣೆ ಮತ್ತು ಕೈಗೆಟುಕುವ ದರಗಳನ್ನು ಒದಗಿಸುವತ್ತ ಆಕಾಶ್‌ ಏರ್ ಗಮನ ಹರಿಸುತ್ತಿದ್ದು, ಕಾರ್ಯಾಚರಣೆಯ ದಕ್ಷತೆಯನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಹೇಳಿದೆ.

ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತೇವೆ ಮತ್ತು ನಿಯತಕಾಲಿಕವಾಗಿ ಇಂಧನ ಸರ್ಚಾರ್ಜ್ ಅನ್ನು ಪರಿಶೀಲಿಸುತ್ತೇವೆ ಎಂದು ಕಂಪನಿ ಭರವಸೆ ನೀಡಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular