HomeLatest NewsBIG NEWS : ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್.! ಏನಿರುತ್ತೆ..ಏನಿರಲ್ಲ..? ಇಲ್ಲಿದೆ ಕಂಪ್ಲೀಟ್...

BIG NEWS : ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್.! ಏನಿರುತ್ತೆ..ಏನಿರಲ್ಲ..? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದದ ಹಿನ್ನೆಲೆ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್’ಗೆ ಕರೆ ನೀಡಿವೆ. ಈ ಬಂದ್’ಗೆ ಹೋಟೆಲ್, ಆಟೋ, ಖಾಸಗಿ ಸಾರಿಗೆ ಸೇರಿದಂತೆ 80ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಘೋಷಿಸಿವೆ.

ಬಂದ್ ಯಶಸ್ವಿಗೊಳಿಸುವ ಉದ್ದೇಶದಿಂದ ವಿವಿಧ ಸಂಘಟನೆಗಳ ಮುಖಂಡರು ಸಭೆ ನಡೆಸಿ ರಾಜ್ಯದ ಜನತೆಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಕಾವೇರಿ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರ್ಥವಾಗಿ ರಕ್ಷಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.

ಹೋಟೆಲ್ ಮಾಲೀಕರ ಸಂಘ, ಆಟೋ ಚಾಲಕರ ಸಂಘಗಳು, ಖಾಸಗಿ ಸಾರಿಗೆ ಸಂಘಟನೆಗಳು ಸೇರಿದಂತೆ ಹಲವು ವ್ಯಾಪಾರ ಮತ್ತು ಸಾಮಾಜಿಕ ಸಂಘಟನೆಗಳು ನೈತಿಕ ಬೆಂಬಲ ಘೋಷಿಸಿರುವುದರಿಂದ ಬಂದ್ನ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ ಅಗತ್ಯ ಸೇವೆಗಳ ಕುರಿತು ಅಂತಿಮ ನಿರ್ಧಾರವನ್ನು ಸಂಬಂಧಿತ ಇಲಾಖೆ ಹಾಗೂ ಸ್ಥಳೀಯ ಆಡಳಿತ ಪ್ರಕಟಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಸಾರಿಗೆ ಮತ್ತು ವ್ಯಾಪಾರ ಸೇವೆಗಳ ಕುರಿತು ಮುಂಚಿತವಾಗಿ ಮಾಹಿತಿ ಪಡೆದು ಯೋಜನೆ ರೂಪಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ. ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಮತ್ತು ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.

ಬಂದ್ ಗೆ ಬೆಂಬಲ ಕೊಟ್ಟವರಾರು..? ಏನಿರುತ್ತೆ..? ಏನಿರಲ್ಲ ಇಲ್ಲಿದೆ ಮಾಹಿತಿ
ಆಟೋ ಸಂಚಾರ ಸಂಪೂರ್ಣ ಬಂದ್ ಆಗುವ ಸಾಧ್ಯತೆಯಿದೆ. ಪ್ರತಿಭಟನೆಗಳು ಮತ್ತು ರಸ್ತೆ ತಡೆಗಳು ನಡೆಯಬಹುದು. ಕೆಲವು ವ್ಯಾಪಾರ ಮಳಿಗೆಗಳು ಹಾಗೂ ಹೋಟೆಲ್ಗಳು ಮುಚ್ಚಿರಬಹುದು.

*ತುರ್ತು ಸೇವೆಗಳಾದ ಆಸ್ಪತ್ರೆ, ಔಷಧಿ ಅಂಗಡಿಗಳು ಮತ್ತು ಹಾಲು ಹಾಗೂ ತುರ್ತು ಸರಬರಾಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಸರ್ಕಾರದ ಅಂತಿಮ ತೀರ್ಮಾನ ಹಾಗೂ ಸಾರಿಗೆ ನಿಗಮಗಳ ಅಧಿಕೃತ ಆದೇಶದ ಮೇರೆಗೆ ಸಾರಿಗೆ ಸಂಚಾರದ ಬಗ್ಗೆ ಸ್ಪಷ್ಟನೆ ಸಿಗಲಿದೆ.

* ಬಂದ್’ಗೆ ಲಾರಿ ಮಾಲೀಕರ ಸಂಘ, ವಕೀಲರ ಸಂಘ ಬೆಂಬಲ ನೀಡಿದೆ.

*ಬಂದ್ ಗೆ ಒಲಾ-ಊಬರ್ ಮತ್ತು ಆಟೋ ಚಾಲಕರ ಸಂಘಗಳು, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ಇದರಿಂದ ರಾಜ್ಯದ ಹಲವೆಡೆ ಸಾರಿಗೆ ಹಾಗೂ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

*ಅಗತ್ಯ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗದಂತೆ ಆಸ್ಪತ್ರೆಗಳು, ಮೆಡಿಕಲ್ ಅಂಗಡಿಗಳು, ಬ್ಯಾಂಕ್ಗಳು, ಪೆಟ್ರೋಲ್ ಬಂಕ್ಗಳು, ಹಾಲು ಸಾಗಣೆ ಸೇವೆ ಹಾಗೂ ನಮ್ಮ ಮೆಟ್ರೋ ಸಂಚಾರ ಎಂದಿನಂತೆ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.

* ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.ಈ ಬಗ್ಗೆ ಯಾವುದೇ ನಿರ್ಧಾರ ಇನ್ನೂ ಕೈಗೊಂಡಿಲ್ಲ.

ಬಂದ್ ಗೆ ರಾಜ್ಯ ಸರ್ಕಾರಿ ನೌಕರರ ಬೆಂಬಲ
ಆಗಸ್ಟ್ 13ರಂದು ನಡೆಯಲಿರುವ ರಾಜ್ಯವ್ಯಾಪಿ ಕರ್ನಾಟಕ ಬಂದ್ಗೆ ರಾಜ್ಯ ಸರ್ಕಾರಿ ನೌಕರರ ಸಂಘವೂ ಬೆಂಬಲ ಘೋಷಿಸಿದೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಕರೆ ನೀಡಿರುವ ಬಂದ್ಗೆ ವಿವಿಧ ಸಂಘಟನೆಗಳ ಜೊತೆಗೆ ಸರ್ಕಾರಿ ನೌಕರರ ಸಂಘ ಕೂಡ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular