HomeLatest NewsBREAKING: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

BREAKING: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧ ಆಯ್ಕೆಯಾಗಿದ್ದಾರೆ.

ಮಹಾಸಭಾದಲ್ಲಿ ನಡೆದಿರುವ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಚಿವ ಈಶ್ವರ ಖಂಡ್ರೆ ಅವರನ್ನು 24ನೇ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಈಶ್ವರ ಖಂಡ್ರೆ ಆಯ್ಕೆಯಾಗಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ, ಇತ್ತೀಚಿಗೆ ಲಿಂಗೈಕ್ಯರಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮತ್ತು ಗೌರವಾಧ್ಯಕ್ಷರಾದ ಶತಾಯುಷಿ ಭೀಮಣ್ಣ ಖಂಡ್ರೆ ಅವರಿಗೆ ಗೌರವ ನಮನ ಸಲ್ಲಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular