HomeKarnatakaಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಗುಡ್ ನ್ಯೂಸ್: ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಣೆ:...

ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಗುಡ್ ನ್ಯೂಸ್: ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಣೆ: ಮೇ 31 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ

ಮಡಿಕೇರಿ: ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಸಾಗುವಳಿ ಚೀಟಿ ವಿತರಿಸಲಾಗುತ್ತಿದೆ. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ. ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಮೇ, 31 ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಇದ್ದು, ಈ ಅವಕಾಶವನ್ನು ಅರ್ಹರು ಸುದುಪಯೋಗ ಮಾಡಿಕೊಳ್ಳುವಂತೆ ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದ್ದಾರೆ.

ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 57 ಮಂದಿಗೆ ‘ಸಾಗುವಳಿ ಚೀಟಿ’ ವಿತರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಡಿಕೇರಿ ತಾಲ್ಲೂಕಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 705 ಅರ್ಜಿಗಳಲ್ಲಿ 545 ಮಂದಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ. ಇನ್ನೂ ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಮೇ 31 ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಇದ್ದು, ಈ ಅವಕಾಶವನ್ನು ಅರ್ಹರು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಹಕ್ಕು ಪತ್ರ ಪಡೆದವರು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಉಲ್ಲಂಘಿಸಿದಂತಾಗುತ್ತದೆ. ಸರ್ಕಾರ ರೈತರ ಪರವಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಬೆಳೆ ಹಾನಿ ಪರಿಹಾರ, ಕೃಷಿಕರ ಖಾತೆಗೆ 10 ಸಾವಿರ ರೂ. ಸಹಾಯಧನ, ಟಾರ್ಪಲ್ ವಿತರಣೆ, ಕೃಷಿ ಪಂಪ್‍ಸೆಟ್ ಅಳವಡಿಕೆ, ಸಹಾಯಧನದಡಿ ಬಿತ್ತನೆ ಬೀಜ, ಕೃಷಿಕರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಕೃಷಿಕರು ಸ್ವಾವಲಂಬನೆಯಿಂದ ಬದುಕುವಂತಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಎಲ್ಲರೂ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕರೆ ನೀಡಿದರು.

ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರು ಮಾತನಾಡಿ, ಅಕ್ರಮ ಸಕ್ರಮದಡಿ ಅರ್ಜಿ ಸಲ್ಲಿಸಿದ ಅರ್ಹರೆಲ್ಲರಿಗೂ ನ್ಯಾಯ ಒದಗಿಸಲು ಪ್ರಯತ್ನಿಸಲಾಗಿದ್ದು, ಸಾಗುವಳಿ ಚೀಟಿ ಪಡೆದವರು ಸಹಕಾರ ಸಂಘದ ಮೂಲಕ ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಬಹುದಾಗಿದೆ ಎಂದರು.

ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಕವಿತಾ ಪ್ರಭಾಕರ್, ಮಿಟ್ಟು ರಂಜಿತ್, ಪೆರಾಜೆಯ ಸುಭಾಷ್, ಕಂದಾಯ ಇಲಾಖೆಯ ಸದಾಶಿವ ಇತರರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular