ಬೆಂಗಳೂರು : ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಡಿಸಿಎಫ್ ವರ್ಗಾವಣೆ ಮಾಡಲಾಗಿದೆ.
ಬಿಬಿಎಂಪಿ ಡಿಸಿಎಫ್ ಬಿಎಲ್ ಜಿ ಸ್ವಾಮಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಸ್ವಾಮಿ ಜಾಗಕ್ಕೆ ಚಿಕ್ಕಮಗಳೂರು ಡಿಸಿಎಫ್ G.K ಸುದರ್ಶನ್ ನೇಮಿಸಿ ಆದೇಶ ಹೊರಡಿಸಲಾಗಿದೆ.
ಜೂನ್ 15ರಂದು ಬನಶಂಕರಿ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಷಯ್ ತಲೆಮೇಲೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಲೆಗೆ ತೀವ್ರವಾದ ಪೆಟ್ಟು ಬಿದ್ದ ಕಾರಣ ಪ್ರಜ್ಞೆ ಕಳೆದುಕೊಂಡಿದ್ದ ಅಕ್ಷಯ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮರದ ಕೊಂಬೆ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದ ಯುವಕ ಅಕ್ಷಯ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಸಾವಿನಲ್ಲೂ ನೋವಿನ ನಡುವೆ ಕುಟುಂಬದವರು ಸಾರ್ಥಕತೆ ಮೆರೆದಿದ್ದಾರೆ. ಅಕ್ಷಯ್ ನ ಎರಡೂ ಕಣ್ಣುಗಳನ್ನು ಕಿಮ್ಸ್ ಆಸ್ಪತ್ರೆಗೆ ನೀಡಲು ಮುಂದಾಗಿದೆ.

