ಬೆಂಗಳೂರು : ಬೆಂಗಳೂರಿನಲ್ಲಿ ಮರದ ಕೊಂಬೆ ಬಿದ್ದು ಯುವಕ ಅಕ್ಷಯ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ ಮೂವರು ಅರಣ್ಯಾಧಿಕಾರಿಗಳ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಬೆನಕ್ ರಾಜ್ ಎಂಬವವರು ಹನುಂತರ ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಅರಣ್ಯಾಧಿಕಾರಿಗಳಾದ ಆರ್ ಎಫ್ ಒ, ಎಸಿಎಫ್, ಡಿಎಫ್ ಒ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ. ಆರ್ ಎಫ್ ಒ ಎ 1 ಆರೋಪಿ, ಎಸಿಎಫ್ ಎ2 ಆರೋಪಿ, ಡಿಎಫ್ಒ ಎ3 ಎಂದು ಉಲ್ಲೇಖಿಸಲಾಗಿದೆ.
ಜೂನ್ 15ರಂದು ಬನಶಂಕರಿ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಷಯ್ ತಲೆಮೇಲೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಲೆಗೆ ತೀವ್ರವಾದ ಪೆಟ್ಟು ಬಿದ್ದ ಕಾರಣ ಪ್ರಜ್ಞೆ ಕಳೆದುಕೊಂಡಿದ್ದ ಅಕ್ಷಯ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮರದ ಕೊಂಬೆ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದ ಯುವಕ ಅಕ್ಷಯ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಸಾವಿನಲ್ಲೂ ನೋವಿನ ನಡುವೆ ಕುಟುಂಬದವರು ಸಾರ್ಥಕತೆ ಮೆರೆದಿದ್ದಾರೆ. ಅಕ್ಷಯ್ ನ ಎರಡೂ ಕಣ್ಣುಗಳನ್ನು ಕಿಮ್ಸ್ ಆಸ್ಪತ್ರೆಗೆ ನೀಡಲು ಮುಂದಾಗಿದೆ.