HomeLatest NewsBIG NEWS : ದೆಹಲಿ ಕೆಂಪುಕೋಟೆ ಬಾಂಬ್ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ: ವಿಶ್ವಸಂಸ್ಥೆ ವರದಿ...

BIG NEWS : ದೆಹಲಿ ಕೆಂಪುಕೋಟೆ ಬಾಂಬ್ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ: ವಿಶ್ವಸಂಸ್ಥೆ ವರದಿ ಬಹಿರಂಗ

ನವದೆಹಲಿಯ ಕೆಂಪುಕೋಟೆ ಸಮೀಪ ಕಳೆದ ವರ್ಷ ನವೆಂಬರ್ 2025ರಲ್ಲಿ ನಡೆದ ಭೀಕರ ಕಾರು ಬಾಂಬ್ ಸ್ಫೋಟದ ಹಿಂದೆ ಅಲ್‌ಖೈದಾ ಇನ್ ದಿ ಇಂಡಿಯನ್ ಸಬ್‌ಕಾಂಟಿನೆಂಟ್ (AQIS) ಉಗ್ರ ಸಂಘಟನೆಯ ಕೈವಾಡವಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಬಂಧಗಳ ಮೇಲ್ವಿಚಾರಣಾ ತಂಡ ತನ್ನವರದಿಯಲ್ಲಿ ಅಧಿಕೃತವಾಗಿ ತಿಳಿಸಿದೆ.

2025ರ ನವೆಂಬರ್ 10ರಂದು ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ನಂಬರ್ 1ರ ಬಳಿ ವಾಹನ ಆಧಾರಿತ ಸುಧಾರಿತ ಸ್ಫೋಟಕ ಸಾಧನ (VBIED) ಬಳಸಿ ಬಾಂಬ್ ಸ್ಫೋಟ ನಡೆಸಲಾಗಿತ್ತು. ಈ ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಜೊತೆಗೆ ಭಾರಿ ಪ್ರಮಾಣದ ಆಸ್ತಿ ಹಾನಿ ಸಂಭವಿಸಿತ್ತು.

ಈ ದಾಳಿಗೂ AQISಗೂ ಸಂಬಂಧವಿರುವುದನ್ನು ವರದಿ ಸ್ಪಷ್ಟಪಡಿಸಿದೆ. ಬಾಂಗ್ಲಾದೇಶವನ್ನು ಕೇಂದ್ರವಾಗಿಸಿಕೊಂಡು ಹೊಸ ಸೆಲ್‌ಗಳನ್ನು ರಚಿಸುವ ಮೂಲಕ ಪ್ರಾದೇಶಿಕ ಉಗ್ರ ಸಂಘಟನೆಯಾಗಿ ಬೆಳೆಯಲು AQIS ಪ್ರಯತ್ನಿಸುತ್ತಿದೆ ಎಂದು ವಿಶ್ವಸಂಸ್ಥೆ ಆತಂಕ ವ್ಯಕ್ತಪಡಿಸಿದೆ. ನಿಧಿ ಸಂಗ್ರಹಣೆ ಸೇರಿದಂತೆ ಸಣ್ಣ, ವಿಕೇಂದ್ರೀಕೃತ ಗುಂಪುಗಳ ಮೂಲಕ ತನ್ನ ಚಟುವಟಿಕೆಗಳನ್ನು ವಿಸ್ತರಿಸುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಈ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆಯನ್ನು ಈಗಾಗಲೇ ಪೂರ್ಣಗೊಳಿಸಿರುವ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಈ ವರ್ಷದ ಮೇ ತಿಂಗಳಲ್ಲಿ 10 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು. AQISನ ಅಂಗಸಂಸ್ಥೆಯಾದ ಅನ್ಸಾರ್ ಗಜ್ವಾತ್-ಉಲ್-ಹಿಂದ್ ಜೊತೆ ಸಂಪರ್ಕ ಹೊಂದಿದ್ದ ಆರೋಪಿಗಳ ಪೈಕಿ ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಮಾಜಿ ಸಹಾಯಕ ಪ್ರಾಧ್ಯಾಪಕ ಉಮರ್ ಉನ್-ನಬಿಯನ್ನು ಪ್ರಮುಖ ಸಂಚುಕೋರ ಎಂದು ಪೊಲೀಸರು ಗುರುತಿಸಿದ್ದರು.ದಾಳಿಯ ಸಂದರ್ಭದಲ್ಲಿ ಸಂಭವಿಸಿದ ಸ್ಫೋಟದಲ್ಲೇ ಆರೋಪಿ ಉಮರ್ ಉನ್-ನಬಿ ಮೃತಪಟ್ಟಿದ್ದಾನೆ ಎಂದು NIA ತನ್ನ ಚಾರ್ಜ್‌ಶೀಟ್‌ನಲ್ಲಿ ತಿಳಿಸಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular