HomeKarnatakaಆಲಮಟ್ಟಿ ಅಣೆಕಟ್ಟೆಯಲ್ಲಿ ಇಂದು ಕೃಷ್ಣೆಯ ಜಲಧಿಗೆ ಸಿಎಂ ಗಂಗಾಪೂಜೆ, ಬಾಗಿನ ಅರ್ಪಣೆ

ಆಲಮಟ್ಟಿ ಅಣೆಕಟ್ಟೆಯಲ್ಲಿ ಇಂದು ಕೃಷ್ಣೆಯ ಜಲಧಿಗೆ ಸಿಎಂ ಗಂಗಾಪೂಜೆ, ಬಾಗಿನ ಅರ್ಪಣೆ

ವಿಜಯಪುರ: ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕು ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ ಆಲಮಟ್ಟಿ ಅಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಬಾಗಿನ ಅರ್ಪಿಸಲಿದ್ದಾರೆ.

ಬುಧವಾರ ಮಧ್ಯಾಹ್ನ 1 ಗಂಟೆಗೆ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಮತ್ತು ಬಾಗಿನ ಅರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸಚಿವರಾದ ಶಿವಾನಂದ ಪಾಟೀಲ, ಎಂ.ಬಿ. ಪಾಟೀಲ, ಆರ್.ಬಿ. ತಿಮ್ಮಾಪುರ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಉತ್ತರ ಕರ್ನಾಟಕ ಭಾಗದ ಜೀವನಾಡಿಯಾಗಿರುವ ಕೃಷ್ಣಾ ನದಿ ಮೈದುಂಬಿ ಹರಿದು ಆಲಮಟ್ಟಿ ಅಣೆಕಟ್ಟು ಗರಿಷ್ಠ ಮಟ್ಟ 519.60 ಮೀಟರ್ ತಲುಪಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ವತಿಯಿಂದ ಕೃಷ್ಣಾ ನದಿಗೆ ಗಂಗಾ ಪೂಜೆ ಮತ್ತು ಬಾಗಿನ ಅರ್ಪಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಲಮಟ್ಟಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿದ್ದು, ಪ್ರವಾಸಿಗರನ್ನು ಸೆಳೆಯುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular