HomeLatest Newsಆಳಂದದ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಅನುಮತಿ

ಆಳಂದದ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಅನುಮತಿ

ನವದೆಹಲಿ: ಕಲಬುರಗಿ ಜಿಲ್ಲೆಯ ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಕಲಬುರಗಿ ಹೈಕೋರ್ಟ್ ಪೀಠ ನೀಡಿದ್ದ ಆದೇಶವನ್ನು ಎತ್ತಿಹಿಡಿದಿದೆ.

ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಅವಕಾಶ ಕೊಡದಂತೆ ದರ್ಗಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶವನ್ನು ಪುರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ದರ್ಗಾದಲ್ಲಿ ಮಹಾಶಿವರಾತ್ರಿ ಪೂಜೆಗೆ ಇದ್ದ ಕಾನೂನು ತಿಡಕುಗಳು ನಿವಾರಣೆಯಾದಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 11ರಂದು ಕಲಬುರಗಿ ಹೈಕೋರ್ಟ್‌ ​ ಪೀಠ ಶಿವರಾತ್ರಿ ಪೂಜೆಗೆ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಸುಪ್ರೀಂ ಕೋರ್ಟ್​ ಕೂಡ ಅನುಮತಿ ನೀಡಿದೆ. ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸಮ್ಮಿತಿ ನೀಡಿದೆ. ದರ್ಗಾ ಆವರಣದಲ್ಲಿ ಪೂಜೆಗೆ ಅವಕಾಶ ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದರ್ಗಾ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಪೂಜೆಗೆ ಅವಕಾಶ ನೀಡಿದೆ. ಸಂವಿಧಾನದ 32ನೇ ವಿಧಿ ಇಂತಹ ಉದ್ದೇಶಗಳಿಗಾಗಿ ಅಲ್ಲ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರರ ವಿರುದ್ಧ ಗರಂ ಆಗಿದೆ. ಕೂಡಲೇ ಅರ್ಜಿಯನ್ನು ಹಿಂಪಡೆಯುವಂತೆ ದರ್ಗಾ ಪರ ಅರ್ಜಿದಾರರಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ದರ್ಗಾ ಸಮಿತಿಗೆ ಹಿನ್ನಡೆಯಾಗಿದೆ.

ಆಳಂದದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿ ರಾಘವ ಚೈತನ್ಯ ಶಿವಲಿಂಗವಿದೆ. ಇಲ್ಲಿ ಪೂಜೆ ಸಲ್ಲಿಸುವ ವಿಚಾರವಾಗಿ ಕಳೆದ ಕೆಲವು ವರ್ಷಗಳಿಂದ ಎರಡು ಸಮುದಾಯಗಳ ನಡುವೆ ಕಾನೂನು ಹೋರಾಟ ನಡೆಯುತ್ತಿದೆ. ಶಾಂತಿ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಕೆಲವು ನಿರ್ಬಂಧಗಳನ್ನು ವಿಧಿಸುತ್ತಾ ಬಂದಿತ್ತು. ಸುಪ್ರೀಂ ಕೋರ್ಟ್ ಪೂಜೆಗೆ ಅವಕಾಶ ನೀಡಿರುವುದರಿಂದ, ಮಹಾಶಿವರಾತ್ರಿಯಂದು ಲಾಡ್ಲೆ ಮಶಾಕ್ ದರ್ಗಾದಲ್ಲಿ ವಿಶೇಶವಾಗಿ ಪೂಜಾ ಕಾರ್ಯಗಳು ನೆರವೇರಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular