BIG NEWS: ಆಳಂದದಲ್ಲಿ ಮತಗಳ್ಳತನ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ಓರ್ವ ಅರೆಸ್ಟ್

ನವದೆಹಲಿ: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ಪ್ರಕರಣ ಸಂಬಂಧ ಎಸ್ ಐಟಿ ವಿಶೇಷ ತನಿಖಾ ತಂಡ ಓರ್ವನನ್ನು ಬಂಧಿಸಿದೆ.

ಪಶ್ಚಿಮ ಬಂಗಾಳದಲ್ಲಿ ಆರೋಪಿಯನ್ನು ಬಂಧಿಸಿದ್ದು, ಇದು ಮತಗಳ್ಳತನ ಪ್ರಕರಣದ ತನಿಖೆಯಲ್ಲಿ ಮೊದಲ ಬಂಧನವಾಗಿದೆ. ಆಳಂದದಲ್ಲಿ ಚುನಾವಣಾ ವಂಚನೆ ಹಾಗೂ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು.

ಇದೀಗ ಈ ಪ್ರಕರಣ ಸಂಬಂಧ ಪಶ್ಚಿಮ ಬಂಗಾಳದಲ್ಲಿ ಬಾಪಿ ಅದ್ಯ ಎಂಬಾತನನ್ನು ಬಂಧಿಸಲಾಗಿದೆ. ಈತನನ್ನು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಘುಗುರಗಚ್ಚಿ ಹಂಸ್ಕಲಿ ಪ್ರದೇಶದಿಂದ ಬಂಧಿಸಿ ಬೆಂಗಳೂರಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಯನ್ನು 12 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read