HomeBusinessಮದ್ಯಪ್ರಿಯರಿಗೆ ಸಿಹಿ ಸುದ್ದಿ: ಜನವರಿವರೆಗೆ ರಾಜ್ಯದಲ್ಲಿ ಬಿಯರ್ ದರ ಹೆಚ್ಚಳ ಇಲ್ಲ

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಜನವರಿವರೆಗೆ ರಾಜ್ಯದಲ್ಲಿ ಬಿಯರ್ ದರ ಹೆಚ್ಚಳ ಇಲ್ಲ

ಬೆಂಗಳೂರು: ಕಡಿಮೆ ದರದ ಕೆಲವು ಬಿಯರ್ ಗಳ ಬೆಲೆ ಹೆಚ್ಚಳಕ್ಕೆ ಮುಂದಾಗಿದ್ದ ಸರ್ಕಾರ ಸದ್ಯಕ್ಕೆ ದರ ಹೆಚ್ಚಳ ನಿರ್ಧಾರವನ್ನು ಮುಂದೂಡಿದೆ ಎಂದು ಹೇಳಲಾಗಿದೆ.

ಬಿಯರ್ ಗಳ ತಯಾರಿಕೆಯಲ್ಲಿ ಬಳಸಲಾಗುವ ಪದಾರ್ಥಗಳನ್ನು ಪರಿಗಣಿಸಿ ಕೆಲವು ಬ್ರಾಂಡ್ ಗಳ ಬಿಯರ್ ದರ ಹೆಚ್ಚಿಸುವ ನಿಟ್ಟಿನಲ್ಲಿ ಅಬಕಾರಿ ಇಲಾಖೆಯಿಂದ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಕೂಡ ಆಹ್ವಾನಿಸಲಾಗಿದೆ.

ಚಳಿಗಾಲದ ಹಿನ್ನೆಲೆಯಲ್ಲಿ ಬಿಯರ್ ಮಾರಾಟ ಕಡಿಮೆ. ಚಳಿಗಾಲದಲ್ಲಿ ಮದ್ಯಪ್ರಿಯರು ಹೆಚ್ಚಾಗಿ ಬಿಯರ್ ಸೇವನೆ ಮಾಡುವುದಿಲ್ಲ. ಬೊಕ್ಕಸಕ್ಕೆ ರಾಜಸ್ವ ಸಂಗ್ರಹ ಕೂಡ ಕಡಿಮೆಯಾಗಿರುತ್ತದೆ. ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ದರ ಹೆಚ್ಚಳ ಮಾಡಿದರೆ ಆದಾಯ ಕಡಿಮೆಯಾಗುತ್ತದೆ. ಹೀಗಾಗಿ ಜನವರಿವರೆಗೆ ಕಾದು ನೋಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular