ಮಡಿಕೇರಿ : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ನಡೆಯುವ ನಾಥಂಗಲ್ ಶ್ರೀ ಕಾಳಿ ದೇವರ ಜಾತ್ರೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಮೇ, 05 ರಂದು ಬೆಳಗ್ಗೆ 6 ಗಂಟೆಯಿಂದ ಮೇ, 06 ರ ಸಂಜೆ 6 ಗಂಟೆಯವರೆಗೆ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.
ಮೇ, 02 ರಂದು ವಿದ್ಯುತ್ ವ್ಯತ್ಯಯ
ಮಡಿಕೇರಿ : ವಿದ್ಯುತ್ ವಿತರಣಾ ಉಪಕೇಂದ್ರ 66/11 ಕೆ.ವಿ ಪೊನ್ನಂಪೇಟೆಯಿಂದ ಹೊರಹೊಮ್ಮುವ ಎಫ್11 ಕೋಟೂರು ಹಾಗೂ ಎಫ್15 ಬೆಕ್ಕೆಸೊಡ್ಲೂರು ಫೀಡರ್‍ನಲ್ಲಿ ಮೇ, 02 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ತೂಚಮಕೇರಿ, ಬಲ್ಯಮಂಡೂರು, ಚಿಕ್ಕಮಂಡೂರು, ಕೋಟೂರು, ಮುಗುಟಗೇರಿ, ಬೆಕ್ಕೆಸೊಡ್ಲೂರು, ಬಲ್ಯಮಂಡೂರು, ಕೋತೂರು, ಕಾನೂರು, ವಡ್ಡರಮಾಡು, ನಿಡುಗುಂಬ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

