ಎಚ್ಚರ : ‘ವೈದ್ಯಕೀಯ ಸಿಬ್ಬಂದಿ’ ಮೇಲೆ ಹಲ್ಲೆ ನಡೆಸಿದ್ರೆ 7 ವರ್ಷ ಜೈಲು ಶಿಕ್ಷೆ, 2 ಲಕ್ಷ ರೂ. ದಂಡ..!

ಬೆಂಗಳೂರು : ವೃತ್ತಿಪರ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲೆ ಹಿಂಸಾಚಾರ, ಹಲ್ಲೆ, ಅಪಮಾನ ಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ನಿಂದನೆ ಮಾಡಿದ್ದಲ್ಲಿ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ, ₹25 ಸಾವಿರದಿಂದ ₹2 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಹಾಗೂ ವೃತ್ತಿಪರ ವೈದ್ಯರಿಗೆ ನೋಂದಣಿ ಕಡ್ಡಾಯ ಮಾಡುವ ಮಹತ್ವದ ಮಸೂದೆಯನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಅಂಗೀಕರಿಸಲಾಗಿದೆ.

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಗಟ್ಟಲು ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರೊಂದಿಗೆ ನಕಲಿ ವೈದ್ಯ ವೃತ್ತಿಯಲ್ಲಿ ತೊಡಗಿರುವವರಿಗೆ ₹10 ಸಾವಿರದಿಂದ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು. ಈ ಮೂಲಕ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read